LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕಾಂಗೋದ ಬುಕಾವು ನಗರದಲ್ಲಿ ಭೀಕರ ಅಗ್ನಿ ಅವಘಡ

29 ಮಕ್ಕಳು ಸಜೀವ ದಹನ



ಬುಕಾವು: ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶದ ಬಂಡುಕೋರರ ನಿಯಂತ್ರಣದಲ್ಲಿರುವ ಬುಕಾವು ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 29 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.ದಕ್ಷಿಣ ಕಿವು ಪ್ರಾಂತ್ಯದ ರಾಜಧಾನಿಯಾಗಿರುವ ಬುಕಾವುವಿನ ಚಿಂಪುAಡಾ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ವಸತಿ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಬಳಿಕ ಸಮೀಪದಲ್ಲಿದ್ದ ಉಜಾಮಾ ಪ್ರಾಥಮಿಕ ಶಾಲೆ ಮತ್ತು ಫುರಾಹಾ ಪ್ರೌಢಶಾಲೆಗೂ ವ್ಯಾಪಿಸಿದೆ.ಅಗ್ನಿ ಅವಘಡದಲ್ಲಿ ಎರಡು ಶಾಲೆಗಳ ಜೊತೆಗೆ ಸುಮಾರು 300 ಮರದ ಮನೆಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಜೀವ ಉಳಿಸಿಕೊಳ್ಳಲು ಆತಂಕದಿಂದ ಓಡಿದ್ದಾರೆ.ಬೆಂಕಿಯಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿಗಳು ಶಾಲೆಯಿಂದ ಹೊರಬರಲು ಯತ್ನಿಸಿದ ಸಂದರ್ಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ನಿರ್ಗಮನ ದಾರಿ ಕಿರಿದಾಗಿದ್ದ ಕಾರಣ ಕೆಲವರು ಕಿಟಕಿಗಳ ಮೂಲಕ ಹೊರಬರಲು ಪ್ರಯತ್ನಿಸಿದ್ದಾರೆ. ಈ ವೇಳೆ ಹಲವರು ಕೆಳಗೆ ಬಿದ್ದು ಗಾಯಗೊಂಡಿದ್ದು, ಕೆಲವರು ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯ ಆರೋಗ್ಯ ಕೇಂದ್ರವೊಂದರ ನರ್ಸ್ ನೀಡಿದ ಮಾಹಿತಿ ಪ್ರಕಾರ, ಸುಮಾರು 50 ವಿದ್ಯಾರ್ಥಿಗಳು ಮತ್ತು ಕೆಲವು ಶಿಕ್ಷಕರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯಿAದ ಹೊಗೆ ಉಸಿರಾಡಿದ ಪರಿಣಾಮ ಹಲವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. Aಈಅ/ಒ23 ಬಂಡುಕೋರ ಸಂಘಟನೆಯ ವಕ್ತಾರರ ಪ್ರಕಾರ, 29 ಮಂದಿ ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 21 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ 19 ಬಾಲಕಿಯರು ಮತ್ತು 5 ಬಾಲಕರು ಸೇರಿದ್ದಾರೆ ಎಂದು ಸಂಘಟನೆಯ ವಕ್ತಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST