ಪಾಕಿಸ್ತಾನ : ಪಾಕಿಸ್ತಾನದ ಪೇಶಾವರದ ದಿರ್ ಕಾಲೋನಿಯಲ್ಲಿ ನಡೆದ ಖಾಸಗಿ ಶಾಲೆಯ ಮೇಲ್ಚಾವಣಿ ಕುಸಿತದ ಭೀಕರ ದುರಂತದಲ್ಲಿ 34 ಮಕ್ಕಳು ಹಾಗೂ ಓರ್ವ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತಪಟ್ಟ ಎಲ್ಲಾ ವಿದ್ಯಾರ್ಥಿಗಳು 13 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರು ಎಂದು ತಿಳಿದುಬಂದಿದೆ.
ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯವನ್ನು ಕೈಗೊಂಡಿದೆ. ನಿರ್ಲಕ್ಷ್ಯದ ಆರೋಪದ ಮೇಲೆ ಶಾಲೆಯ ಮುಖ್ಯಸ್ಥನನ್ನು ಪೊಲೀಸರು ಬಂಧಿಸಿದ್ದು, ಈ ಘಟನೆಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತೀವ್ರ ಸಂತಾಪ ಸೂಚಿಸಿದ್ದಾರೆ.