LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಕ್ಯಾಲೆಂಡರ್" ಬಿಡುಗಡೆ ಒಂದು ವಾರ ಮುಂದಕ್ಕೆ

ಈ ಹಿಂದೆ "ಸ್ವಾರ್ಥ ರತ್ನ" ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ "ಕ್ಯಾಲೆಂಡರ್" ಚಿತ್ರ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿದೆ. ಮಹಿಳಾ ಪ್ರಧಾನ ಈ ಚಿತ್ರ ಏಪ್ರಿಲ್ 3 ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರತಂಡ ಈ ಹಿಂದೆ ತಿಳಿಸಿತ್ತು. ಪ್ರಸ್ತುತ "ದುರಂಧರ್ 2" ಚಿತ್ರ ರಾಜ್ಯಾದ್ಯಂತ ಪ್ರದರ್ಶನ ಕಾಣುತ್ತಿರುವುದರಿಂದ ಹೆಚ್ಚಿನ ಚಿತ್ರಮಂದಿರಗಳಲ್ಲಿ ಆ ಚಿತ್ರ ಪ್ರದರ್ಶನ ಕಾಣುತ್ತಿದೆ. ಹಾಗಾಗಿ "ಕ್ಯಾಲೆಂಡರ್" ಚಿತ್ರಕ್ಕೆ ಚಿತ್ರಮಂದಿರಗಳ ಸಮಸ್ಯೆ ಎದುರಾಗಿದೆ. ಆ ಕಾರಣದಿಂದ "ಕ್ಯಾಲೆಂಡರ್" ಚಿತ್ರ ಬಿಡುಗಡೆಯನ್ನು ಒಂದು ವಾರ ತಡವಾಗಿ ಏಪ್ರಿಲ್ 10ರಂದು ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರದ ನಿರ್ಮಾಪಕರೂ ಆಗಿರುವ ನಾಯಕ ಆದರ್ಶ ಗುಂಡುರಾಜ್ ತಿಳಿಸಿದ್ದಾರೆ. ಈ ಚಿತ್ರದ ನಾಯಕಿಯರಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಟಿಸಿದ್ದಾರೆ.ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ರಮೇಶ್ ಕೊಯಿರಾ ಛಾಯಾಗ್ರಹಣ, ಕೆ.ಜಿ.ಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಅವರ ಸಹ ನಿರ್ದೇಶನವಿರುವ ಈ ಚಿತ್ರವನ್ನು ನವೀನ್ ಶಕ್ತಿ ನಿರ್ದೇಶಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು