LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಜಲಪಾತದಲ್ಲಿ ಮುಳಗಿ ಯುವಕ ಸಾವು

ಚಿಕ್ಕಮಗಳೂರು: ಜಿಲ್ಲೆಯ ಕೆಮ್ಮನಗುಂಡಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ 25 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು. ಇಬ್ಬರು ಬಾಡಿಗೆಗೆ ಬೈಕ್ ತೆಗೆದುಕೊಂಡು ವಿವಿಧ ಸ್ಥಳಗಳಿಗೆ ತೆರಳಿದ್ದರು.

ಕೆಲವೆಡೆ ಭೇಟಿ ನೀಡಿದ ಬಳಿಕ ಸೋಮವಾರ ಹೆಬ್ಬೆ ಜಲಪಾತ ತಲುಪಿದ್ದರು.'ಮುಂಗಾರು ಮಳೆಯಿಂದಾಗಿ, ಜಲಪಾತವು ತುಂಬಿ ಹರಿಯುತ್ತಿದೆ. ಜಲಪಾತ ತುಂಬಾ ಆಳವಾಗಿರಲಿಲ್ಲವಾದರೂ, ಬಂಡೆಗಳು ತುಂಬಾ ಜಾರುತ್ತಿದ್ದವು. ಅವರಿಗೆ ಈಜು ಬರುತ್ತಿರಲಿಲ್ಲವಾದರೂ, ನೀರಿಗೆ ಇಳಿಯಲು ನಿರ್ಧರಿಸಿದ್ದರು' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರವಣ್ ಕಾಲು ಜಾರಿ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದ್ದಾನೆ. ಈ ವೇಳೆ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಶ್ರವಣ್ ಅವರನ್ನು ರಕ್ಷಿಸಿದ್ದಾರೆ.'ಆತನನ್ನು ಹೊರಗೆ ತರುವಾಗ ಇನ್ನೂ ಜೀವಂತವಾಗಿದ್ದನು. ಹೆಬ್ಬೆ ಜಲಪಾತದ ಬಳಿ ಸಂದರ್ಶಕರಲ್ಲಿ ಒಬ್ಬ ವೈದ್ಯರಿದ್ದರು, ಅವರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದಾರೆ.

ನಂತರ ಆತನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ' ಎಂದು ಅಧಿಕಾರಿ ಹೇಳಿದ್ದಾರೆ.ಶ್ರವಣ್ ಇ-ಕಾಮರ್ಸ್ ಸಂಸ್ಥೆಯೊಂದರಲ್ಲಿ ಸಿಸ್ಟಮ್ ವಿಶ್ಲೇಷಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು