LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೂಡಲೇ ಬಿಎಂಟಿಸಿ ಚಾಲಕರಿಗೆ ವೇತನ ಪಾವತಿಸಿ: ಎಎಪಿ ಆಗ್ರಹ

ಬೆಂಗಳೂರು: ರಾಜಧಾನಿಗೆ ಎಲೆಕ್ಟ್ರಿಕ್ ಬಸ್ ಗಳ ಅಗತ್ಯವಿದೆ. ಆದರೆ ಇ-ಬಸ್ ಗಳ ನೆಪದಲ್ಲಿ ಬಿಎಂಟಿಸಿ ಸಂಸ್ಥೆಯನ್ನೇ ಖಾಸಗಿಕರಣಗೊಳಿಸುವುದಕ್ಕೆ ತೀವ್ರ ವಿರೋಧವಿದೆ. ಪ್ರಯಾಣಿಕರು, ಚಾಲಕರು ಹಾಗೂ ನಿರ್ವಾಹಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಕಾರ್ಯನಿರ್ವಹಿಸಬೇಕೇ ವಿನಃ ಇಲೆಕ್ಟ್ರಿಕ್ ಬಸ್ ಪೂರೈಸಿದ ಕಂಪನಿಗಳಿಗೆ ಲಾಭ ಮಾಡಿಕೊಡುವುದಕ್ಕಲ್ಲ.

ಈ ಕೂಡಲೇ ಗುತ್ತಿಗೆ ಕಂಪನಿಗಳು ಚಾಲಕರಿಗೆ ವೇತನ ಪಾವತಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಜಗದೀಶ್ ವಿ. ಸದಂ ಆಗ್ರಹ ಪಡಿಸಿದರು.
ಬೆಂಗಳೂರು ನಗರಕ್ಕೆ ಸುಮಾರು 600 ಇ-ಬಸ್ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. 3 ಕಂಪನಿಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಆದರೆ ಈ ಒಪ್ಪಂದದಲ್ಲಿ ಚಾಲಕರು ಮತ್ತು ನಿರ್ವಾಹಕರಿಗೆ ಅನ್ಯಾಯ ಮಾಡಲಾಗುತ್ತಿದೆ.

ಬಸ್ ಪೂರೈಸಿದ ಸಂಸ್ಥೆಗಳೇ ಚಾಲಕರನ್ನು ನೇಮಕ ಮಾಡಿಕೊಳ್ಳುತ್ತಿದೆ.ನಿರ್ವಾಹಕರ ಹುದ್ದೆಗಳನ್ನು ಸಂಪೂರ್ಣ ಕಡಿತಗೊಳಿಸುತ್ತಿದೆ. ಸಂಬಳ ವಿಚಾರದಲ್ಲೂ ಚಾಲಕರಿಗೆ ಭದ್ರತೆ ಇಲ್ಲವಾಗಿದೆ. ಈಗಾಗಲೇ 136 ಬಸ್ ಗಳನ್ನು ಖಾಸಗಿ ಸಂಸ್ಥೆಯಿಂದ ಪಡೆದುಕೊಳ್ಳಲಾಗಿದ್ದು, ಇವುಗಳನ್ನು ಸಂಪೂರ್ಣವಾಗಿ ಖಾಸಗಿ ಸಂಸ್ಥೆಯೇ ನಿರ್ವಹಿಸುತ್ತಿದೆ. ಕಳೆದ 3 ತಿಂಗಳಿಂದ ಚಾಲಕರಿಗೆ ವೇತನ ನೀಡಿಲ್ಲ.

ಕೆಲವು ಚಾಲಕರಿಗೆ ಕೊಟ್ಟಿರುವ ವೇತನದಲ್ಲೂ ನಿಗದಿಗಿಂತ ಕಡಿಮೆ ಕೊಡಲಾಗಿದೆ. ಅಲ್ಲದೆ ಈ ಕಂಪನಿಗಳು ಕಾರ್ಮಿಕರ ಭವಿಷ್ಯ ನಿಧಿ ಹಣವನ್ನು ಸಹ ಪಾವತಿಸದೆ ಮೋಸ ಮಾಡುತ್ತಿವೆ. ತಕ್ಷಣ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಿದರು.

ಚಾಲಕರಿಗೆ ಕೊಡಲಾಗುತ್ತಿರುವ ವೇತನವೇ ಕನಿಷ್ಠ ಪ್ರಮಾಣದ್ದಾಗಿದೆ. ಅದರಲ್ಲೂ ಕಡಿತ ಮಾಡಿಕೊಡಲಾಗುತ್ತಿದೆ. ಜೊತೆಗೆ ಗ್ಲಾಸ್, ಕಿಟಕಿ ಮತ್ತಿತರ ವಸ್ತುಗಳಿಗೆ ಹಾನಿಯಾದರೆ ಚಾಲಕರ ಸಂಬಳದಿಂದಲೇ ದಂಡ ಪಾವತಿ ಮಾಡಿಕೊಳ್ಳಲಾಗುತ್ತಿದೆ. ಬಿಎಂಟಿಸಿ ಘಟಕದ ಬಸ್ ಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುತ್ತಿರುವುದು ಸರಿಯಲ್ಲ. ಇ-ಬಸ್ ಖರೀದಿಗೆ ಕೇಂದ್ರದಿಂದ ಸಾಕಷ್ಟು ಅನುದಾನ ಸಿಗುತ್ತಿದ್ದರೂ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದು ಆಕ್ಷೇಪಾರ್ಹ. ಕಂಪನಿಗಳಿಂದ ಎಲೆಕ್ಟ್ರಿಕ್ ಬಸ್ ಗಳನ್ನು ಬಿಎಂಟಿಸಿ ಸಂಸ್ಥೆ ನೇರವಾಗಿ ಖರೀದಿಸಿ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು