LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

‘ಬೆಂಗಳೂರು’ ಎಂದೇ ಉಲ್ಲೇಖಿಸುವಂತೆ ರಾಜ್ಯಪಾಲರಿಗೆ ಎಎಪಿ ಮನವಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(ಐಐಎಂ-ಬಿ) ಸುವರ್ಣ ಮಹೋತ್ಸವ ಉದ್ಘಾಟಿಸಿದ ಸಂಬಂಧ ರಾಜ್ಯಪಾಲರ ಕಚೇರಿಯಿಂದ ಹೊರಡಿಸಲಾದ ಮಾಧ್ಯಮ ಬಿಡುಗಡೆ ಪತ್ರದಲ್ಲಿ ಬೆಂಗಳೂರಿನ ಹೆಸರನ್ನು ತಪ್ಪಾಗಿ ಉಲ್ಲೇಖಿಸಿದ್ದಕ್ಕೆ ಆಮ್ ಆದ್ಮಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

ಬೆಂಗಳೂರಿನ ಹೆಸರನ್ನು ಬೆಂಗಳೂರು ಎಂದೇ ಉಲ್ಲೇಖಿಸಬೇಕು. ಬ್ಯಾಂಗಲೋರ್ ಎನ್ನುವುದು ತಪ್ಪು. ಬೆಂಗಳೂರು ಎಂಬುದು ಬೆಂಗಳೂರಿಗರ ಹೆಮ್ಮೆ ಸಂಕೇತವಾಗಿದೆ. ಕನ್ನಡಿಗರ ಪ್ರತಿಷ್ಠೆಯಾಗಿದೆ. ಕರ್ನಾಟಕದ ರಾಜಧಾನಿಯ ಹೆಸರನ್ನು ಅಧಿಕೃತವಾಗಿ ಬೆಂಗಳೂರು ಎಂದು ಘೋಷಿಸಲಾಗಿದೆ. ಹಾಗಾಗಿ ಅಧಿಕೃತ ಹೇಳಿಕೆಗಳಲ್ಲಿ ಬೆಂಗಳೂರು ಎಂದೇ ಬಳಕೆ ಮಾಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪಕ್ಷದ ರಾಜ್ಯ ಉಪಾಧ್ಯಕ್ಷ ರಮೇಶ್ ಬೆಲ್ಲಂಕೊಂಡ ಮನವಿ ಮಾಡಿದ್ದಾರೆ.

ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಮೇಶ್ ಬೆಲ್ಲಂಕೊಂಡ ಅವರು ಪತ್ರ ಬರೆದು ಬೆಂಗಳೂರು ಎಂದು ಬಳಸುವಂತೆ ಕೋರಿದ್ದಾರೆ.2005ರ ಡಿಸೆಂಬರ್ 11ರಂದು ಬ್ಯಾಂಗಲೋರ್ ಹೆಸರನ್ನು ಬೆಂಗಳೂರು ಎಂದು ಅಧಿಕೃತವಾಗಿ ದಾಖಲಿಸಬೇಕು ಎಂಬ ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ ಅವರ ಮನವಿಯನ್ನು ರಾಜ್ಯಪಾಲರು ಸ್ವೀಕರಿಸಿದ್ದರು.

2006 ಸೆಪ್ಟೆಂಬರ್ 27ರಂದು ‘ಬೆಂಗಳೂರು’ ಎಂಬ ಹೆಸರನ್ನು ಘೋಷಿಸಿ ಬಿಬಿಎಂಪಿ ಅಧಿಕೃತ ನಿರ್ಣಯವನ್ನು ಅನುಮೋದಿಸಿದೆ ಹಾಗೂ ರಾಜ್ಯಪಾಲರ ಭವನದಿಂದ ಪ್ರಕಟಿಸುವ ಯಾವುದೇ ಅಧಿಕೃತ ಪತ್ರಗಳು ಕನ್ನಡದಲ್ಲಿಯೂ ಸಹ ಪ್ರಕಟಿಸಲು ರಮೇಶ್ ಬೆಳ್ಳಂಕೊಂಡ ಮನವಿ ಮಾಡಿಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು