LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಕ್ರೀಡಾ ಸಂಸ್ಥೆಗಳ ನೋಂದಣಿಯಿAದ ಮಾನ್ಯತೆ: ಅರುಣ್ ಮಾಚಯ್ಯ

ಚಾಮರಾಜನಗರ: ಜಿಲ್ಲೆಯಲ್ಲಿರುವ ಕ್ರೀಡಾ ಸಂಸ್ಥೆಗಳು ನಿಯಮಾನುಸಾರ ನೋಂದಾಯಿಸಿಕೊಳ್ಳಬೇಕು. ಇದರಿಂದ ರಾಜ್ಯ ಕ್ರೀಡಾ ಸಂಸ್ಥೆಗಳಿAದ ಮಾನ್ಯತೆ ದೊರೆಯುವುದಲ್ಲದೇ ನೆರವಾಗುವ ನಿಟ್ಟಿನಲ್ಲಿ ಎಲ್ಲ ಸಹಕಾರ ಸಿಗಲಿದೆ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್. ಅರುಣ್ ಮಾಚಯ್ಯ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾ ಕ್ರೀಡಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಕ್ರೀಡೆಯ ಅಭಿವೃದ್ದಿ ಸಂಬAಧ ಸಮಾಲೋಚನೆ ಸಭೆ ನಡೆಸಿ ಅವರು ಮಾತನಾಡಿದರು.
ಕರ್ನಾಟಕ ಕ್ರೀಡಾ ಪ್ರಾಧಿಕಾರ ಜಿಲ್ಲೆಗಳಿಗೆ ಭೇಟಿ ನೀಡಿ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ಹಾಗೂ ಕ್ರೀಡಾ ಸಂಸ್ಥೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಮುಂದೆ ಕ್ರೀಡಾ ಅಭಿವೃದ್ದಿ ಸಂಬಂಧ ಕೈಗೊಳ್ಳಬೇಕಿರುವ ಕುರಿತು ಸಮಾಲೋಚನೆ ನಡೆಸುತ್ತಿದೆ. ಈಗಾಗಲೇ 22 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಕ್ರೀಡಾ ಅಸೋಸಿಯೇಷನ್‌ಗಳು ಇದ್ದರೆ ಕ್ರೀಡೆ ಸಂಬAಧ ಚಟುವಟಿಕೆಗಳು ಇನ್ನಷ್ಟು ಉತ್ತಮವಾಗಿ ನಡೆದು ಕ್ರೀಡಾ ಕ್ಷೇತ್ರದ ಪ್ರಗತಿಗೆ ಅನುಕೂಲವಾಗಲಿದೆ. ಹೀಗಾಗಿ ಕ್ರೀಡಾ ಸಂಸ್ಥೆಗಳು ನೋಂದಣಿಯಾಗಬೇಕು ಎಂದರು.
ಕ್ರೀಡೆಯಲ್ಲಿ ಗ್ರಾಮಾಂತರ ಪ್ರದೇಶಗಳಿಗು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗ್ರಾಮಾಂತರ ಭಾಗದ ಪ್ರತಿಭೆಗಳನ್ನು ಗುರುತಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಕೆಲಸ ಮಾಡುತ್ತಿದೆ. ಮೊದಲ ಬಾರಿಗೆ ಗುಡ್ಡಗಾಡು ಪ್ರದೇಶದ ಜನರ ಕ್ರೀಡಾಕೂಟಗಳನ್ನು ಆಯೋಜಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.
ಲಭ್ಯವಿರುವ ಕ್ರೀಡಾ ಸೌಲಭ್ಯಗಳನ್ನು ನಿರ್ವಹಣೆ ಮಾಡಬೇಕಿದೆ. ಮೂಲ ಸೌಕರ್ಯಗಳು ಸಹ ಸಮರ್ಪಕವಾಗಿ ಲಭ್ಯವಾದರೆ ಆದಾಯವು ಸಹ ಬರಲಿದೆ. ಜಿಲ್ಲೆಯ ಕ್ರೀಡಾಂಗಣಗಳ ಅಭಿವೃದ್ದಿ, ಕ್ರೀಡಾ ಪಟುಗಳಿಗೆ ಉತ್ತೇಜನ ಸೇರಿದಂತೆ ಕ್ರೀಡಾ ಕ್ಷೇತ್ರದ ಅಭಿವೃದ್ದಿ ಸಂಬಂಧ ಶಾಸಕರೊಂದಿಗೂ ಸಮಾಲೋಚಿಸಲಾಗುವುದು. ಕ್ರೀಡಾ ಸಂಸ್ಥೆಗಳ ಮಾನ್ಯತೆ, ಪ್ರೋತ್ಸಾಹ ಸೇರಿದಂತೆ ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ಅವಶ್ಯವಿರುವ ಸಹಕಾರ ಕ್ರೀಡಾ ಪ್ರಾಧಿಕಾರದಿಂದ ನೀಡಲಾಗುವುದೆಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್. ಅರುಣ್ ಮಾಚಯ್ಯ ಅವರು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಕ್ರೀಡಾ ಸಂಸ್ಥೆಯ ಅಧ್ಯಕ್ಷರು, ಕ್ರೀಡಾ ಪಟುಗಳು, ಸಂಘಟನೆಗಳ ಮುಖಂಡರು ಮಾತನಾಡಿ ಜಿಲ್ಲಾ ಕೇಂದ್ರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಳೆದ 20 ವರ್ಷಗಳಿಂದಲೂ ಕಾಮಗಾರಿ ನಡೆಯುತ್ತಿದೆ. ಆದರೂ ಪೂರ್ಣವಾಗಿಲ್ಲ. ಕ್ರೀಡಾ ಅಂಕಣಗಳು ನಿರ್ಮಾಣವಾದರೆ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ. ಬಾಲ್ ಬ್ಯಾಡ್ಮಿಂಟನ್, ನೆಟ್ ಬಾಲ್, ಖೋ ಖೋ, ಕಬ್ಬಡ್ಡಿ ಸೇರಿದಂತೆ ಇನ್ನಿತರ ಕ್ರೀಡೆಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಆಸಕ್ತರಿದ್ದಾರೆ. ಇವರಿಗೆ ಕ್ರೀಡಾ ಸೌಲಭ್ಯಗಳು ಲಭ್ಯವಾದರೆ ಹೆಚ್ಚಿನ ಸಾಧನೆಗೆ ಅನುಕೂಲವಾಗುತ್ತದೆ. ಕ್ರೀಡಾ ತರಬೇತುದಾರರನ್ನು ನೇಮಕ ಮಾಡಬೇಕಿದೆ. ಇಲಾಖೆಯ ಪ್ರಶಸ್ತಿಗಳಿಗೂ ಜಿಲ್ಲೆಯ ಸಾಧಕರನ್ನು ಗುರುತಿಸಬೇಕು ಎಂಬುದೂ ಸೇರಿದಂತೆ ಹಲವು ಅಭಿಪ್ರಾಯ ಸಮಸ್ಯೆಗಳನ್ನು ಗಮನಕ್ಕೆ ತಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಹೆಚ್.ಎಸ್. ಬಿಂದ್ಯಾ, ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಸಿದ್ದರಾಜು, ಕ್ರೀಡಾ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕ್ರೀಡಾಪಟುಗಳಾದ ಶ್ರೀನಿವಾಸ ಪ್ರಸಾದ್, ಚಾ.ರಂ. ಶ್ರೀನಿವಾಸಗೌಡ, ಜಿ. ಬಂಗಾರು, ರಾಜೇಂದ್ರ, ಸಿ.ಎಂ. ನರಸಿಂಹಮೂರ್ತಿ, ನಂಜುಂಡಸ್ವಾಮಿ, ಸುಮನ್, ಚೇತನ್ ದೊರೈರಾಜು, ಮಹದೇವ ಪ್ರಸಾದ್, ಮಂಜುನಾಥ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಗೂ ಮೊದಲು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್. ಅರುಣ್ ಮಾಚಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಹೆಚ್.ಎಸ್. ಬಿಂದ್ಯಾ ಅವರೊಂದಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿಂಥೆಟಿಕ್ ಟ್ರ್ಯಾಕ್, ಪೆವಿಲಿಯನ್ ಸೇರಿದಂತೆ ಇತರೆ ಕ್ರೀಡಾ ಸೌಕರ್ಯಗಳನ್ನು ಪರಿಶೀಲಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು