LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಾಯಿ ಬೊಗಳಿದ್ದಕ್ಕೆ ಸಾಕಿದ್ದವರ ಮೇಲೆ ಹಲ್ಲೆ ಆರೋಪಿ ಬಂಧನ

ಬೆಂಗಳೂರು: ಮನೆ ಬಳಿ ಬಂದ ಅಪರಿಚಿತರನ್ನು ಕಂಡು ನಾಯಿ ಬೊಗಳಿದ್ದಕ್ಕೆ ಆಕ್ರೋಶಗೊಂಡು, ಅದನ್ನು ಸಾಕಿದ್ದವರ ಮೇಲೆ ಹಲ್ಲೆ ಮಾಡಿದ್ದ ಪಕ್ಕದ ಮನೆಯಾತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪಟ್ಟೇಗಾರಪಾಳ್ಯದ ಮುನೇಶ್ವರ ನಗರದಲ್ಲಿ ವಾಸವಾಗಿದ್ದ 20 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಪಕ್ಕದ ಮನೆ ನಿವಾಸಿ ಶಂಕರ್ ಎಂಬಾತನನ್ನು ಬಂಧಿಸಲಾಗಿದೆ.ಯುವತಿ ತಂದೆ-ತಾಯಿಯೊಂದಿಗೆ ವಾಸ ಮಾಡುತ್ತಿದ್ದಳು. ಈಕೆಯ ಪಕ್ಕದ ಮನೆಯಲ್ಲಿ ಆರೋಪಿ ಶಂಕರ್ ವಾಸವಾಗಿದ್ದ. ಮೊನ್ನೆ ಮಾರ್ಚ್ 7ರ ರಾತ್ರಿ ಶಂಕರ್ ಹಾಗೂ ಆತನ ಸಹಚರರು ಮನೆಗೆ ಬರುವಾಗ ಅಪರಿಚಿತರನ್ನು ಕಂಡ ಸಾಕುನಾಯಿ ಬೊಗಳಿದೆ.

ಪರಿಣಾಮ ಶಂಕರ್ ಹಾಗೂ ಆತನ ಸಹಚರರು ನಾಯಿ ಮೇಲೆ ದಾಳಿ ಮಾಡಿದ್ದಾರೆ. ಇದನ್ನು ಕಂಡು ಪ್ರಶ್ನಿಸಿದ ಯುವತಿ ಕುಟುಂಬಸ್ಥ ರೊಂದಿಗೂ ಶಂಕರ್ ಗ್ಯಾಂಗ್ ಮಾತಿನ ಚಕಮಕಿಗಿಳಿದಿದೆ. ಕ್ಷಣಾರ್ಧದಲ್ಲೆ ಕಬ್ಬಿಣದ ರಾಡ್‍ನಿಂದ ಯುವತಿಯ ತಂದೆ ತಲೆಗೆ ಬಲವಾಗಿ ಹೊಡೆದು ಗಾಯಗೊಳಿಸಿದ್ದಾರೆ. ಅಲ್ಲದೆ, ತಡೆಯಲು ಬಂದ ಯುವತಿಯನ್ನು ಆತನ ಸಹಚರರರು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯುವತಿ ಕೂಡಲೇ ಪೊಲೀಸ್ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ಮಾಹಿತಿ ನೀಡಿ ಪೊಲೀಸರ ನೆರವಿನಿಂದ ತಂದೆಯನ್ನು ಸ್ಥಳೀಯ ಆಸ್ಪತ್ರೆಗೂ ಸೇರಿಸಿದ್ದಾಳೆ. ಆಗಿರುವ ಘಟನೆ ಸಂಬಂಧ ಯುವತಿ ಅಳುತ್ತಲೇ ಮಹಿಳಾ ಆಯೋಗ ಅಧ್ಯಕ್ಷೆಗೂ ವಾಯ್ಸ್ ಮೆಸೇಜ್ ಮಾಡಿದ್ದಳು. ಘಟನೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಶಂಕರ್‍ನನ್ನು ಬಂಧಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು