LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಕ್ರಮ: ರಾಮಲಿಂಗಾರೆಡ್ಡಿ

ರಾಮನಗರ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸುವಂತೆ ಸಾರಿಗೆ ಮತ್ತು ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನಿರ್ದೇಶನ ನೀಡಿದರು.

ಮಾ.1ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕುಡಿಯುವ ನೀರು ಪೂರೈಕೆ ಹಾಗೂ ಮೇವಿನ ವ್ಯವಸ್ಥೆಗಾಗಿ ಪ್ರತಿ ಪಂಚಾಯಿತಿಗೆ 10 ಲಕ್ಷ ರೂ, ತಾಲ್ಲೂಕಿಗೆ 1ಕೋಟಿ ರೂ.ಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳ ಖಾತೆಗೆ 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮಕ್ಕೆ ಕಳೆದ ಸಾಲಿನಲ್ಲಿ 1 ಕೋಟಿ ರೂ.ಗಳ ಅನುದಾನ ನೀಡಲಾಗಿತ್ತು,

ಇದರಲ್ಲಿ 49 ಹೊಸ ಬೋರ್ ವೆಲ್ ಕೊರಿಸಲಾಗಿದೆ, ಅದೇ ರೀತಿ ಬೋರ್ ವೆಲ್ ದುರಸ್ತಿಗಾಗಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದವರು ಹೇಳಿದರು.ಕುಡಿಯುವ ನೀರು ಸರಬರಾಜು ಮಾಡಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ನಲ್ಲಿ ಯಾವುದೇ ಸಂಸ್ಥೆಗಳು ಭಾಗ ವಹಿಸಿರುವುದಿಲ್ಲ.

ಆದುದರಿಂದ ತಾಲ್ಲೂಕು ಪಂಚಾಯಿತಿ ವಾರು ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮವಹಿಸಬೇಕು. ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ ಕ್ರಮವಹಿಸಲಾಗುವುದು ಎಂದರು.ಆನೆದಾಳಿ: ಜಿಲ್ಲೆಯು ಕಾವೇರಿ ಮತ್ತು ಬನ್ನೇರುಘಟ್ಟ ಅರಣ್ಯ ಪ್ರದೇಶಗಳನ್ನು ಒಳಗೊಂಡಿದ್ದು ಅಂದಾಜು 400 ಆನೆಗಳು ಇರುವುದಾಗಿ ಇವುಗಳಲ್ಲಿ 30 ರಿಂದ 40 ಆನೆಗಳು ಹೆಚ್ಚಾಗಿ ಕಾವೇರಿ ಅರಣ್ಯ ಪ್ರದೇಶದಲ್ಲಿ ಓಡಾಟವಿರುತ್ತದೆ.

ಈವೆರೆಗೆ 10 ಜನರು ಆನೆದಾಳಿಗೆ ಒಳಪಟ್ಟು ಮೃತಪಟ್ಟಿರುತ್ತಾರೆ. ಮೃತರಿಗೆ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೆ 33 ಕಿಮೀ ಬ್ಯಾರಿಕೇಡ್ ನಿರ್ಮಿಸಲು ಅನುಮತಿ ದೊರಕಿದ್ದು ಈ ಕಾಮಗಾರಿಯು ಪ್ರಗತಿಯಲಿದೆ ಎಂದರು. ಜಿಲ್ಲೆಯಲ್ಲಿ 1800 ಜನರಿಗೆರ ಇ-ಸ್ವತ್ತು ವಿತರಿಸಲಾಗಿದೆ. ನಮೂನೆ 6-10 ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿದ್ದು ಇದನ್ನು ಕೂಡಲೇ ಇತ್ಯರ್ಥ ಪಡಿಸಲಾಗುವುದು ಎಂದರು.

ರುದ್ರಭೂಮಿಗೆ ಜಮೀನನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಗ್ರಾಮಗಳಲ್ಲಿ ಸ್ಮಶಾನದ ಸಮಸ್ಯೆ ಇರುವುದರಿಂದ ಅಗತ್ಯವಿರುವ ಕಡೆ ಜಾಗ ಗುರುತಿಸಿ ಕೂಡಲೇ ಅವುಗಳನ್ನು ನಿರ್ಮಿಸಲು ಕ್ರಮವಹಿಸುವಂತೆ ಸೂಚಿಸಿದರು.ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಬಾಕಿ ಇರುವ ಫಲಾನುಭವಿಗಳ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಯೋಜನೆ ಗಳನ್ನು ಫಲನುಭವಿಗಳಿಗೆ ದೊರಕಿಸಿಕೊಡಲು ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಎಚ್.ಸಿ. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ ಮತ್ತು ಅ.ದೇವೆಗೌಡ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು