LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜನಕ್ಕೆ ತೊಂದರೆಯಾದರೆ ಕ್ರಮ: ಪರಂ

ಬೆಂಗಳೂರು: ನಾಳೆ ತೈಲ ದರ ಏರಿಕೆ ವಿರೋಧಿಸಿ ವಿಪಕ್ಷಗಳವರು ಪ್ರತಿಭಟನೆ ಮಾಡುತ್ತಿದ್ದು ಈ ಸಂದರ್ಭದಲ್ಲಿ ಜನರಿಗೆ ತೊಂದರೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ಪ್ರತಿಭಟನೆ ಮಾಡುವುದು ಅವರ ಹಕ್ಕು, ಪ್ರತಿಭಟನೆಗೆ ಸಂಬಂಧಪಟ್ಟವರಿಂದ ಅನುಮತಿ ಪಡೆದು ಪ್ರತಿಭಟನೆ ನಡೆಸಲಿ. ಪ್ರತಿಭಟನೆ ವೇಳೆ ಜನರಿಗೆ ತೊಂದರೆಯಾದರೆ ಲಾಠಿ ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.ತೈಲಬೆಲೆ ಏರಿಕೆ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಾಹನಗಳವರು ಪೆಟ್ರೋಲ್ ಡೀಸೆಲ್ ಹಾಕಿಸಿಕೊಳ್ಳುತ್ತಿದ್ದಾರೆ.

ಹೊರ ರಾಜ್ಯದವರು ಸಹ ಬಂದು ನಮ್ಮಲ್ಲಿ ತೈಲ ತುಂಬಿಸಿಕೊಳ್ಳುತ್ತಿದ್ದಾರೆ ಎಂದಿರುವ ಅವರು,ನೀರು ಮತ್ತು ಬಸ್ ಪ್ರಯಾಣದರ ಏರಿಕೆ ಸಂಬಂಧ ಆಯಾ ಇಲಾಖೆಗಳು ನಿರ್ಧಾರ ಕೈಗೊಳ್ಳುತ್ತವೆ ಎಂದು ಹೇಳಿದ್ದಾರೆ.ನಾಳೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಕ್ರಮ ವಿರೋಧಿಸಿ ಬಿಜೆಪಿ ವತಿಯಿಂದ ರಸ್ತ ತಡೆ ಚಲುವಳಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪರಮೇಶ್ವರ್ ಮೇಲಿನಂತೆ ಪ್ರತಿಕ್ರಿಯ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಎಸ್‍ಪಿಪಿ ಅವರನ್ನು ಬದಲಾಯಿಸುತ್ತದೆ ಎಂಬ ವದಂತಿಗಳಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಬದಲಾಯಿಸುವುದಾದರೆ ಮುಖ್ಯಮಂತ್ರಿ ಹಾಗೂ ತಾವು ಕಾನೂನು ರೀತಿಯಲ್ಲಿ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.ದರ್ಶನ್ ಪ್ರಕರಣದಲ್ಲಿ ಯಾವುದೇ ಮುಲಾಜಿಗೆ, ಒತ್ತಡಕ್ಕೆ ಮಣಿಯದೆ ತನಿಖೆ ನಡೆಯುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು