LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಅರಣ್ಯ-ರೈತರ ಮಂಜೂರಾತಿ ಭೂಮಿ ಗೊಂದಲ ನಿವಾರಣೆಗೆ ಕ್ರಮ: ಜಿಲ್ಲಾಧಿಕಾರಿ ರವಿಕುಮಾರ್


ಕೋಲಾರ: ಜಿಲ್ಲೆಯಾದ್ಯಂತ ತಲೆಮಾರುಗಳಿಂದ ಅರಣ್ಯ ಭೂಮಿ ಹಾಗೂ ರೈತರ ಹಿಡುವಳಿ ಜಮೀನುಗಳು ಒಟ್ಟೊಟ್ಟಿಗೆ ಸಾಗುತ್ತಾ ಬಂದಿದ್ದು, 1886, 1900 ಹಾಗೂ 1931 ಮತ್ತು 1941ರ ಅಧಿಸೂಚನೆಗಳು ಸೇರಿದಂತೆ ಮೈಸೂರು ಅರಣ್ಯ ಕಾಯ್ದೆ, ಕರ್ನಾಟಕ ಅರಣ್ಯ ಕಾಯ್ದೆ, ಭಾರತೀಯ ಅರಣ್ಯ ಕಾಯ್ದೆ ಹಾಗೂ ಚೆನ್ನೈ ಅರಣ್ಯ ಕಾಯ್ದೆಗಳ ಅಡಿಯಲ್ಲಿನ ಅಧಿಸೂಚಿತ ಅರಣ್ಯ ಪ್ರದೇಶ ಮತ್ತು ಸಕ್ಷಮ ಪ್ರಾಧಿಕಾರ ಹಾಗೂ ಶಾಸನಬದ್ಧ ಸಮಿತಿಗಳಿಂದ ರೈತರಿಗೆ ಮಂಜೂರಾಗಿರುವ ಜಮೀನುಗಳ ಕುರಿತು ಸ್ಪಷತೆ ತರಲು ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರು, ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ, ಮಾಲೂರು, ಬಂಗಾರಪೇಟೆ ಹಾಗೂ ಕೆಜಿಎಫ್ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಮತ್ತು ರೈತರ ನಡುವೆ ಯಾವುದೇ ವಿವಾದವಿಲ್ಲ; ಅರಣ್ಯ ಭೂಮಿಯನ್ನು ಸಂರಕ್ಷಿಸುವುದರ ಜೊತೆಗೆ ಸರ್ಕಾರದಿಂದ ಹಕ್ಕು ಪಡೆದ ರೈತರ ಹಿತಾಸಕ್ತಿಯನ್ನೂ ರಕ್ಷಿಸುವುದು ಸರ್ಕಾರದ ಆಶಯವಾಗಿದೆ ಎಂದು ಸ್ಪಷ್ಟಪಡಿಸಿದರು.ಮಾನ್ಯ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಂಜೂರಾತಿ ಜಮೀನುಗಳು ಹಾಗೂ ಅರಣ್ಯ ಭೂಮಿಯ ಪಟ್ಟಿಯನ್ನು ಪ್ರತ್ಯೇಕಿಸಿ ವರ್ಗೀಕರಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಜಿಲ್ಲೆಯಲ್ಲಿ ಅಧಿಸೂಚಿತ ಅರಣ್ಯ (ನೋಟಿಫೈಡ್ ಫಾರೆಸ್ಟ್) ಪರಿಶೀಲನೆ ಕಾರ್ಯ ಶೇ. 100 ರಷ್ಟು ಪೂರ್ಣಗೊಂಡಿದೆ. ಸಂಭಾವ್ಯ ಅರಣ್ಯ ಪ್ರದೇಶ (ಪೊಟೆನ್ಷಿಯಲ್ ಫಾರೆಸ್ಟ್ ಲೈಕ್ ಏರಿಯಾ) ಪರಿಶೀಲನೆ ಶೇ. 70 ರಷ್ಟು  ಮುಗಿದಿದ್ದು, ಬಾಕಿ ಇರುವ ಶೇ. 30 ರಷ್ಟು ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರತಿ ವಾರ ಕನಿಷÀ್ಠ ಒಂದು ಅಥವಾ ಎರಡು ಸಭೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ಡೀಮ್ಡ್ ಫಾರೆಸ್ಟ್ಗೆ ಸಂಬAಧಿಸಿದಂತೆ ಜಿಲ್ಲೆಯಲ್ಲಿ ಶೇ. 90 ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಕೇವಲ 15 ಪ್ರಕರಣಗಳು ಮಾತ್ರ ಬಾಕಿ ಇದ್ದು, ಅವುಗಳನ್ನು ಇನ್ನೊಂದು ವಾರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.ಈ ತಿಂಗಳ 5ನೇ ತಾರೀಖಿನಂದು ಮಾನ್ಯ ಅರಣ್ಯ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿ, ಒಂದು ತಿಂಗಳೊಳಗೆ ಅರಣ್ಯ ಅಧಿಸೂಚನೆ ಮತ್ತು ರೈತರ ಮಂಜೂರಾತಿ ಜಮೀನುಗಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ ಪ್ರಪ್ರಥಮವಾಗಿ ಶ್ರೀನಿವಾಸಪುರ ತಾಲೂಕಿನ 6 ಅಧಿಸೂಚನೆಗಳ ವ್ಯಾಪ್ತಿಗೆ ಬರುವ ಗ್ರಾಮಗಳ ದಾಖಲೆಗಳು, 'ಸಿ' ಸ್ಟೇಟ್‌ಮೆಂಟ್ ಹಾಗೂ ಸಕ್ಷಮ ಪ್ರಾಧಿಕಾರದಿಂದ ಮಂಜೂರಾದ ಜಮೀನುಗಳ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಇನ್ನೊಂದು ತಿಂಗಳೊಳಗೆ ಬಾಕಿ ಇರುವ ಎಲ್ಲಾ ಪರಿಶೀಲನಾ ಕಾರ್ಯಗಳನ್ನು ಸಂಪೂರ್ಣವಾಗಿ ಮುಗಿಸಿ, ಕಂದಾಯ ಮತ್ತು ಅರಣ್ಯ ಇಲಾಖೆಗಳ ಸಮನ್ವಯದೊಂದಿಗೆ ಸರ್ಕಾರಕ್ಕೆ ಹಾಗೂ ಮಾನ್ಯ ಅರಣ್ಯ ಸಚಿವರಿಗೆ ಸಮಗ್ರ ವರದಿ ಸಲ್ಲಿಸಿ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೋನಿಯಾಗಾಂಧಿ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ದೇಗುಲ ಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿಗೆ ನಿರಾಕರಣೆಕಬೀರಾನಂದಾಶ್ರಮ ಜಾತ್ಯತೀತ ಶ್ರದ್ಧಾಭಕ್ತಿಯ ಕೇಂದ್ರವಾಗಿ ಬೆಳಸುವಲ್ಲಿ ಶ್ರೀಗಳ ಕೊಡುಗೆ ಅಪಾರಕಬೀರಾನಂದಾಶ್ರಮ ಜಾತ್ಯತೀತ ಶ್ರದ್ಧಾಭಕ್ತಿಯ ಕೇಂದ್ರವಾಗಿ ಬೆಳಸುವಲ್ಲಿ ಶ್ರೀಗಳ ಕೊಡುಗೆ ಅಪಾರಸಿಎಂ ಪೋಸ್ಟರ್ ಅಂಟಿಸುವ ಚಾಳಿ ಬಿಡಲಿಮಕ್ಕಳನ್ನು ಹೇಗೆ ಬೆಳೆಸಬೇಕುವರ್ಷವಿಡೀ ಸುಗಮ ಸಂಗೀತ ಶತಮಾನೋತ್ಸವ ತರಬೇತಿ ಕಾರ್ಯಾಗಾರ: ಡಾ.ಕಿಕ್ಕೇರಿ ಕೃಷ್ಣಮೂರ್ತಿ ಘೋಷಣೆಅರಣ್ಯ-ರೈತರ ಮಂಜೂರಾತಿ ಭೂಮಿ ಗೊಂದಲ ನಿವಾರಣೆಗೆ ಕ್ರಮ: ಜಿಲ್ಲಾಧಿಕಾರಿ ರವಿಕುಮಾರ್ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು: 89 ರನ್‌ಗಳಿಗೆ ಆಲೌಟ್ಮೋದಿ ಅವರಿಂದ ಚಾಮರಾಜನಗರ ಅಮೃತ ರೈಲು ನಿಲ್ದಾಣ ಉದ್ಘಾಟನೆ