LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಾವಿನಲ್ಲೂ ಸಾರ್ಥಕತೆ ಮೆರೆದ `ಕಿರಾತಕ' ನಟ: ಡ್ಯಾನಿಯಲ್ ಬಾಲಾಜಿ ಕಣ್ಣು ದಾನ

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಖಡಕ್ ವಿಲನ್ ಅಂತ ಗುರುತಿಸಿಕೊಂಡಿದ್ದ ನಟ ಡ್ಯಾನಿಯಲ್ ಬಾಲಾಜಿ. ಬಹುಭಾಷಾ ನಟನಾಗಿ ದಕ್ಷಿಣ ಭಾರತದಲ್ಲಿ ಪ್ರೀತಿ ಗಳಿಸಿದ್ದ ಡ್ಯಾನಿಯಲ್ ಬಾಲಾಜಿ ನಿನ್ನೆ(ಮಾರ್ಚ್ 29) ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಟನ ದಿಢೀರ್ ಅಗಲಿಕೆಯ ಶಾಕ್‍ನಿಂದ ಸಿನಿಪ್ರಿಯರು ಇನ್ನೂ ಹೊರಬಂದಿಲ್ಲ. ಡ್ಯಾನಿಯಲ್ ಬಾಲಾಜಿ ತಮಿಳು ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿದ್ದರೂ, ಕನ್ನಡಿಗರಿಗೂ ಚಿರಪರಿಚಿತ. 'ಕಿರಾತಕ' ಸಿನಿಮಾ ಕನ್ನಡಕ್ಕೂ ಕಾಲಿಟ್ಟಿದ್ದ ಡ್ಯಾನಿಯಲ್ ಬಾಲಾಜಿ ದುನಿಯಾ ವಿಜಯ್ ನಟಿಸಿದ 'ಶಿವಾಜಿನಗರ' ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.

ಕನ್ನಡಿಗರು ಇಂದಿಗೂ 'ಕಿರಾತಕ' ಸಿನಿಮಾದ ಪಾತ್ರದಿಂದಲೇ ನೆನಪಿಟ್ಟುಕೊಂಡಿದ್ದಾರೆ. ಡ್ಯಾನಿಯಲ್ ಬಾಲಾಜಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತಮ್ಮ ಕಣ್ಣುಗಳನ್ನು ದಾನ ಮಾಡಿದ್ದ ಬಾಲಾಜಿ ಅವರ ಸಾವಿನ ಬಳಿಕ ಕತ್ತಲೆಯಲ್ಲಿದವರ ಬಾಳನ್ನು ಬೆಳಕಾಗಿಸಿದ್ದಾರೆ. ಸಾವಿನ ಸುದ್ದಿ ಕೇಳಿ ಆತಂಕದಲ್ಲಿದ್ದ ಅಭಿಮಾನಿಗಳು ಡ್ಯಾನಿಯಲ್ ಬಾಲಾಜಿ ಬಗೆಗಿನ ಈ ವಿಷಯ ಕೇಳಿ ಮತ್ತಷ್ಟು ಭಾವುಕರಾಗಿದ್ದಾರೆ.

ಹೃದಯಾಘಾತದಿಂದ ಮೃತ ಪಟ್ಟ ಡ್ಯಾನಿಯಲ್ ಬಾಲಾಜಿ ತೆರೆಮೇಲಷ್ಟೇ ವಿಲನ್ ಅನ್ನೋದನ್ನು ಸಾಬೀತು ಮಾಡಿ ಹೋಗಿದ್ದಾರೆ. ಸಾವಿನಲ್ಲೂ ಕೆಲವರ ಬಾಳಲ್ಲಿ ಬೆಳಕು ತಂದಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ತಿಳಿಯುತ್ತಿದ್ದಂತೆ ಮತ್ತಷ್ಟು ಭಾವುಕರಾಗಿದ್ದಾರೆ. ನಟನ ಒಳ್ಳೆಯ ಗುಣಕ್ಕೆ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡ್ಯಾನಿಯಲ್ ಬಾಲಾಜಿ ತಮಿಳಿನ ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ. ಗೌತಮ್ ವಾಸುದೇವ್ ಮೆನನ್, ವೆಟ್ರಿಮಾರನ್ ಅಂತ ದಿಗ್ಗಜರ ಸಿನಿಮಾಗಳಲ್ಲಿ ನಟಿಸಿದ್ದರು. ಡ್ಯಾನಿಯಲ್ ಬಾಲಾಜಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಂತಮ ದರ್ಶನ ಪಡೆದಿದ್ದಾರೆ. ದಿಢೀರನೇ ಅಗಲಿಗೆ ನಟನ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಡ್ಯಾನಿಯಲ್ ಬಾಲಾಜಿಯ ಅಂತ್ಯಕ್ರಿಯೆ ಇಂದು (ಮಾರ್ಚ್ 30)ರಂದು ತಿರುವನ್ಮಿಯೂರಿನ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಸಂಬಂಧಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು