LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ

ಬೆಂಗಳೂರು: ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ (47) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಖ್ಯಾತಿಯ ದಿಲೀಪ್ ರಾಜ್ ನಿಧನರಾಗಿದ್ದಾರೆ.ಇಂದು ಬೆಳಗಿನ ಜಾವ ಮನೆಯಲ್ಲಿ ಕುಸಿದುಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರು ಕೇವಲ ನಟರಾಗಿ ಮಾತ್ರವಲ್ಲದೆ, ಕಂಠದಾನ ಕಲಾವಿದರಾಗಿ ಮತ್ತು ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. 2007ರಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ `ಮಿಲನ' ಚಿತ್ರದಲ್ಲಿ ಹೇಮಂತ್ ಎಂಬ ನೆಗೆಟಿವ್ ಶೇಡ್ ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದರು. ನಂತರ `ಯು ಟರ್ನ್', `ಲವ್ ಗುರು', `ಗಾನಾ ಬಜಾನಾ', ಮತ್ತು `ಆರ್ಕೆಸ್ಟ್ರಾ ಮೈಸೂರು' ಸೇರಿದಂತೆ ಹಲವು ಚಿತ್ರಗಳಲ್ಲಿ ಗಮನಾರ್ಹ ಪಾತ್ರ ನಿರ್ವಹಿಸಿದ್ದರು.ಕಿರುತೆರೆ ಪಯಣ: `ಜನನಿ', `ರಂಗೋಲಿ', `ರಥಸಪ್ತಮಿ'ಯಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಇತ್ತೀಚೆಗೆ ಜೀ ಕನ್ನಡದ `ಹಿಟ್ಲರ್ ಕಲ್ಯಾಣ' ಧಾರಾವಾಹಿಯ `ಎ.ಜೆ' (ಅಭಿರಾಮ್ ಜಯಶಂಕರ್) ಪಾತ್ರದ ಮೂಲಕ ಮನೆಮಾತಾಗಿದ್ದರು.ನಿರ್ಮಾಣ ಮತ್ತು ಡಬ್ಬಿಂಗ್: ಅವರು `ಪಾರು' ಮತ್ತು `ವಿದ್ಯಾ ವಿನಾಯಕ' ಧಾರಾವಾಹಿಗಳನ್ನು ನಿರ್ಮಿಸಿದ್ದರು. ಅಲ್ಲದೆ, `ಆ ದಿನಗಳು' ಚಿತ್ರದ ನಾಯಕ ಚೇತನ್ ಅವರಿಗೆ ಧ್ವನಿ ನೀಡುವ ಮೂಲಕ ಡಬ್ಬಿಂಗ್ ಕಲಾವಿದರಾಗಿಯೂ ಯಶಸ್ವಿಯಾಗಿದ್ದರು.ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಪತ್ನಿ ಶ್ರೀವಿದ್ಯಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರಂಗಭೂಮಿಯ ಹಿನ್ನೆಲೆಯಿಂದ ಬಂದಿದ್ದ ಇವರು `ಟ್ರೆಡ್ಮಿಲ್' ನಂತಹ ನಾಟಕಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.ಸಂತಾಪ: ದಿಲೀಪ್ ರಾಜ್ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಮತ್ತು ಕಿರುತೆರೆಯ ಕಲಾವಿದರು ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ `ಎಜೆ'ಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು