LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜಕಾರಣದತ್ತ ಮುಖ ಮಾಡಿದ್ರಾ ನಟ ಡಾಲಿ ಧನಂಜಯ್?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷದಿಂದ ಸ್ಫರ್ಧೆ ಮಾಡಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದೆ. ಇತ್ತೀಚೆಗೆ ನಟ ಡಾಲಿ ಧನಂಜಯ್ ಅವರ ವರ್ತನೆಗಳನ್ನು ನೋಡಿದ್ರೆ, ಅವರು ಮುಂದೊಂದು ದಿನ ರಾಜಕೀಯಕ್ಕೆ ಬರುವುದು ಬಹುತೇಕ ನಿಶ್ಚಿತ ಎಂಬುದು ತಿಳಿದು ಬರುತ್ತಿದ್ದು, ಇದಕ್ಕಾಗಿ ವೇದಿಕೆಯನ್ನು ಸೃಷ್ಠಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಿದ್ಧರಾಮಯ್ಯರ ಆಶೀರ್ವಾದ ಹಾಗೂ ಬೆಂಬಲದೊಂದಿಗೆ ರಾಜಕೀಯಕ್ಕೆ ಡಾಲಿ!: ಇನ್ನು ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಆತ್ಯಾಪ್ತ ಬಳಗದಲ್ಲಿ ನಟ ಡಾಲಿ ಧನಂಜಯ್ ಗುರಿತಿಸಿಕೊಂಡಿದ್ದು, ಈಗಾಗಲೇ ನಟನನ್ನು ರಾಜಕಾರಣದತ್ತ ಮುಖ ಮಾಡಲು ಖುದ್ದು ಸಿದ್ಧರಾಮಯ್ಯರೇ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ.

ನಟ ಡಾಲಿ ಧನಂಜಯ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಒಳ್ಳೆಯ ಸಂಬಂಧ ಹಾಗೂ ಸಂಪರ್ಕ ಹೊಂದಿದ್ದು, ಡಾಲಿ ಧನಂಜಯ್ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆಯವರಾಗಿದ್ರೂ ಸಹ, ಅವರ ಹೆಚ್ಚಿನ ಒಡನಾಟ ಮತ್ತು ನಂಟು ಇರುವುದು ಮೈಸೂರಿನಲ್ಲಿ. ಹೀಗಾಗಿ, ಸಿಎಂ ಸಿದ್ಧರಾಮಯ್ಯ ಕೂಡ ಮೈಸೂರು ಜಿಲ್ಲೆಯವರಾಗಿರುವ ಕಾರಣ, ಇಬ್ಬರು ಕೂಡ ಆಗಾಗ್ಗೆ ಭೇಟಿಯಾಗುವುದು, ಮಾತುಕತೆ ನಡೆಸುವುದು ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲೂ ವೇದಿಕೆಯನ್ನು ಹಂಚಿಕೊಂಡಿದ್ದಾರೆ.

ಇತ್ತ ನಟ ಡಾಲಿ ಧನಂಜಯ್‍ಗೆ ಇರುವ ಅಭಿಮಾನಿಗಳನ್ನು ಕಂಡಿರುವ ಸಿಎಂ ಸಿದ್ಧರಾಮಯ್ಯ, ಅದನ್ನು ಸದ್ಭಳಕೆ ಮಾಡಿಕೊಳ್ಳಲು ಡಾಲಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ರಾಜಕಾರಣಕ್ಕೆ ಬರುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.ರಾಜಕಾರಣಕ್ಕೆ ಬಂದರೆ ಎಲ್ಲಿಂದ ಸ್ಪರ್ಧೆ? ಇನ್ನು ಸಿಎಂ ಸಿದ್ಧರಾಮಯ್ಯರ ಮಾತಿನ ಅನ್ವಯ ನಟ ಡಾಲಿ ಧನಂಜಯ್ ರಾಜಕಾರಣಕ್ಕೆ ಬಂದಿದ್ದೇ ಆದ್ರೆ,

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದು, ಇದ್ಯಾವುದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದ್ರೆ, ಕಾಂಗ್ರೆಸ್ ಪಾಳಯದಲ್ಲಿ ಮಾತ್ರ ಈ ವಿಚಾರ ದೊಡ್ಡ ಚರ್ಚೆಯಾಗಿ ಮಾರ್ಪಾಟ್ಟಿದ್ದು, ಇದಕ್ಕೆ ಪಕ್ಷ ಹಾಗೂ ನಟ ಡಾಲಿ ಧನಂಜಯ್ ಸ್ಪಷ್ಟ ಉತ್ತರ ನೀಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು