LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿದ್ಯಾರ್ಥಿಗಳು ಸಾಧನೆ ಮಾಡುವ ಕಡೆ ಗಮನ ಹರಿಸಬೇಕು: ನಟಿ ಸಪ್ತಮಿಗೌಡ

ಕೆಂಗೇರಿ: ಸಾಧನೆ ಮಾಡಬೇಕು ಎಂಬ ಇಚ್ಚೆ ಇದ್ದರೆ ಖಂಡಿತ ಸಾಧಿಸಲು ಸಾಧ್ಯ,ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಖ್ಯಾತ ನಟಿ ಸಪ್ತಮಿಗೌಡ ಹೇಳಿದರು.

ಉತ್ತರಹಳ್ಳಿ ಮುಖ್ಯ ರಸ್ತೆಯ ಆರ್‍ಎನ್‍ಎಸ್‍ಐಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ವಿಭಾಗದಿಂದ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಯಾವುದೇ ಕನಸು ನನಸಾಗಬೇಕಾದರೆ ಸಾಧನೆ ಅತ್ಯಮೂಲ್ಯವಾದದ್ದು, ಜೀವನದಲ್ಲಿ ಜಯವನ್ನು ಪಡೆಯಬೇಕಾದರೆ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆರ್‍ಎನ್‍ಎಸ್‍ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಎಸ್. ರಮೇಶ್ ಬಾಬು ಮಾತನಾಡಿ, ನಮ್ಮ ಭಾರತ ದೇಶದ ಸಂಸ್ಕೃತಿ ಬಹಳ ಮಹತ್ವಪೂರ್ಣದ್ದಾಗಿದೆ. ಎಂಬಿಎ ವಿಭಾಗದ ವತಿಯಿಂದ ಎಲ್ಲಾ ರೀತಿಯ ಕಲಾರೂಪಗಳ ನೃತ್ಯ ಪ್ರದರ್ಶನ ನೀಡುವುದರ ಜತೆಗೆ ಈ ತಾಂತ್ರಿಕ ಯುಗದಲ್ಲಿ ನಮ್ಮ ದೇಶದ ಸಂಸ್ಕೃತಿಯ ಹಿರಿಮೆಯನ್ನು ಪಸರಿಸುವ ಬಗ್ಗೆ ವಿದ್ಯಾರ್ಥಿಗಳು ಚಿಂತಿಸಬೇಕು ಎಂದರು.

2024 ರ ಬಿಗ್ ಬಾಸ್ ವಿಜೇತ ಕಾರ್ತಿಕ್ ಮಹೇಶ್,ವರ್ತೂರ್ ಸಂತೋಷ್, ಆರ್ ಎನ್ ಎಸ್ ಐ ಟಿ ಕಾಲೇಜಿನ ನಿರ್ದೇಶಕ ಡಾ. ಎಂ.ಕೆ. ವೆಂಕಟೇಶ, ಮುಖ್ಯ ತಾಂತ್ರಿಕ ಅಧಿಕಾರಿ ಮುರಳಿ ಕೃಷ್ಣ, ಮೈಸೂರು ಕಾಲೇಜಿನ ಎಂಬಿಎ ವಿಭಾಗದ ಡೀನ್ ಡಾ. ಯು ಬೋಜಣ್ಣ, ಉತ್ತರಹಳ್ಳಿ ಮುಖ್ಯ ರಸ್ತೆಯ ಕಾಲೇಜಿನ ಎಂ.ಬಿ.ಎ ವಿಭಾಗದ ಮುಖ್ಯಸ್ಥ ಡಾ. ಜಿವಿಎಂ ಶರ್ಮ ಹಾಗೂ ಕಾರ್ಯಕ್ರಮದ ನಿರ್ದೇಶಕ ಡಾ. ದೀಪಕ್ ಕುಮಾರ್ ಮತ್ತು ಡಾ. ರಾಕೇಶ್ ನಾಗರಾಜ್ ಉಪಸ್ಥಿತರಿದ್ದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ರಾಜ್ಯದ ಸುಮಾರು ಐವತ್ತಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಕನ್ನಡ ನಾಡು ನುಡಿಯ ಹಿರಿಮೆಯನ್ನು ಸಾರುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು