LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

'ರಾಜಸ್ಥಾನ್' ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ "ತಾರಿಣಿ" ಆಯ್ಕೆ.

ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ 'ಸಿದ್ದು ಪೂರ್ಣಚಂದ್ರ'ರವರು ಮತ್ತೊಂದು ಅಂತಹದೇ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ "ತಾರಿಣಿ". ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ "ರಾಜಸ್ಥಾನ್ ಇಂಟನ್ರ್ಯಾಷನಲ್ ಫಿಲ್ಮ್ ಫೆಸ್ಟಿವಲ್" ಗೆ 'ತಾರಿಣಿ' ಆಯ್ಕೆಯಾಗಿದೆ ಎಂದು ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ.

ಜನವರಿ ತಿಂಗಳಲ್ಲಿ ರಾಜಸ್ಥಾನದ 'ಜೈಪುರ್" ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳುವರು ಎಂದು ಚಿತ್ರದ ನಿರ್ದೇಶಕ "ಸಿದ್ದು ಪೂರ್ಣಚಂದ್ರ" ರವರು ಮಾಹಿತಿ ಹಂಚಿಕೊಂಡರು. "ಶ್ರೀ ಗಜನಿ ಪ್ರೊಡಕ್ಷನ್ಸ್" ಲಾಂಛನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ, ಜೊತೆಗೆ ಒಂದು ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.

ಗರ್ಭಿಣಿ ಮಹಿಳೆ ಕುರಿತಾದ ಕಥಾ ಸಾರಾಂಶ ಹೊಂದಿರುವ "ತಾರಿಣಿ" ಚಿತ್ರದಲ್ಲಿ ನಿಜವಾಗಿಯೂ ಪ್ರಗ್ನೆಂಟ್ ಆಗಿಯೇ ಮಮತಾ ರಾಹುತ್ ರವರು ಅಭಿನಯಿಸಿದ್ದಾರೆ. ಆಗಷ್ಟೇ ಹುಟ್ಟಿದ ಮಮತಾ ರಾಹುತ್ ಅವರ ಮಗುವಿನ ದೃಶ್ಯಗಳೂ 'ತಾರಿಣಿ' ಚಿತ್ರದಲ್ಲಿರುವುದು ವಿಶೇಷ. ಈಗಾಗಲೇ ಅನೇಕ ಚಿತ್ರೋತ್ಸವಗಳಿಗೂ ಈ ಚಿತ್ರವನ್ನು ಕಳುಹಿಸಲಾಗಿದೆ ಎಲ್ಲಾ ಕಡೆಯೂ ಪ್ರದರ್ಶನಗೊಂಡು ಅವಾರ್ಡ್ ಗೆಲ್ಲುವ ನಿರೀಕ್ಷೆಯಿದೆ ಎಂದು ನಿರ್ದೇಶಕರು ಆತ್ಮವಿಶ್ವಾಸ ತೋರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು