LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಟಿ ಶರ್ಮಿಳಾ ಮಾಂಡ್ರೆ ಮತ್ತು ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ

ದಕ್ಷಿಣ ಭಾರತದ ಚಿತ್ರರಂಗದ ಜನಪ್ರಿಯ ನಟಿ ಹಾಗೂ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರು ತಮ್ಮ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಾರೆ. ಆಪ್ತ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದಾರೆ.ಶರ್ಮಿಳಾ ಮಾಂಡ್ರೆ 2007ರಲ್ಲಿ ಬಿಡುಗಡೆಯಾದ `ಸಜನಿ' ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಆನಂತರ `ಕೃಷ್ಣ', `ನವಗ್ರಹ', `ಸ್ವಯಂವರ', `ಆಕೆ', `ಗಾಳಿಪಟ 2', `ಪೌಡರ್' ಹಾಗೂ ಇತ್ತೀಚಿನ `ಡೆವಿಲ್' ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಟನೆಯ ಜೊತೆಗೆ `ಶರ್ಮಿಳಾ ಮಾಂಡ್ರೆ ಪ್ರೊಡಕ್ಷನ್ಸ್' ಸಂಸ್ಥೆಯ ಮೂಲಕ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದಾರೆ. 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು, ಕಂಟೆಂಟ್ ಆಧಾರಿತ ಸಿನಿಮಾಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.ಪ್ರತಿಷ್ಠಿತ ಚಲನಚಿತ್ರ ನಿರ್ಮಾಣ ಸಂಸ್ಥೆಯಾದ "ಪ್ಯಾಶನ್ ಸ್ಟುಡಿಯೋಸ್" ನ ಸಂಸ್ಥಾಪಕರು ಹಾಗೂ ನಿರ್ಮಾಪಕರಾದ ಸುಧನ್ ಸುಂದರಂ ಅವರು ಚಿತ್ರರಂಗಕ್ಕೆ ಹಲವು ಗುಣಮಟ್ಟದ ಸಿನಿಮಾಗಳನ್ನು ನೀಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿಬಂದ `ಕಪ್ಪಲ್', `ನಿಬುಣನ್', `ಸೀತಕಾತಿ', `ಅನಬೆಲ್ ಸೇತುಪತಿ' ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ `ಪಾರ್ಕಿಂಗ್' ಮತ್ತು ವಿಜಯ್ ಸೇತುಪತಿ ಅಭಿನಯದ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ `ಮಹಾರಾಜ' ಸೇರಿದಂತೆ ಹಲವು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳನ್ನು ಇವರು ನಿರ್ಮಿಸಿದ್ದಾರೆ. "ಇದು ನಮ್ಮ ಜೀವನದ ಅತ್ಯಂತ ಸುಂದರ ಹಾಗೂ ವಿಶೇಷವಾದ ಅಧ್ಯಾಯ. ನಮ್ಮ ಮೇಲೆ ಪ್ರೀತಿ ಮತ್ತು ಆಶೀರ್ವಾದ ಮಳೆಗರೆದ ಎಲ್ಲರಿಗೂ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಮ್ಮ ಈ ಹೊಸ ಜೀವನದ ಪಯಣವನ್ನು ಎದುರುನೋಡುತ್ತಿದ್ದೇವೆ." ಎಂದು ಶರ್ಮಿಳಾ ಮಾಂಡ್ರೆ ಹೇಳಿದರೆ, "ನಮ್ಮ ಬೆಂಬಲಕ್ಕೆ ನಿಂತಿರುವ ನಮ್ಮ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳ ಪ್ರೀತಿ ಮತ್ತು ಸಹಕಾರಕ್ಕೆ ನಾವು ಎಂದಿಗೂ ಚಿರಋಣಿ." ಎಂಬುದು ಸುಧನ್ ಸುಂದರA ಅವರ ಮಾತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು