LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಮತ ಎಣಿಕೆ ಕಾರ್ಯ: ಅಚ್ಚುಕಟ್ಟು ನಿರ್ವಹಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸೂಚನೆ

ಚಾಮರಾಜನಗರ: ಚುನಾವಣೆಯ ಮತ ಎಣಿಕೆ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಹೊಣೆಗಾರಿಕೆಯಿಂದ ನಿರ್ವಹಿಸುವಂತೆ 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ನಗರದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯಕ್ಕಾಗಿ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ 2ನೇ ಹಂತದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮತ ಎಣಿಕೆಯು ಜೂನ್ 4ರಂದು ನಗರದ ನಂಜನಗೂಡು ರಸ್ತೆಯಲ್ಲಿರುವ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಮತ ಎಣಿಕೆ ಕಾರ್ಯವು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಲಿದೆ. ಈ ನಿಟ್ಟಿನಲ್ಲಿ ಮತ ಎಣಿಕೆಯನ್ನು ಅಚ್ಚುಕಟ್ಟಾಗಿ ಹಾಗೂ ಜವಾಬ್ದಾರಿಯುತ ಹೊಣೆಗಾರಿಕೆಯಿಂದ ನಿರ್ವಹಿಸಲು ನಿಯೋಜಿತರಾಗಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಶಿಸ್ತು, ಸಂಯಮ ಹಾಗೂ ಸಮಯಪ್ರಜ್ಞೆ, ಏಕಾಗ್ರತೆ ಹೊಂದಿರಬೇಕು ಎಂದರು.

ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ತಹಶೀಲ್ದಾರ್ ಹಂತದಲ್ಲಿ ಸಿದ್ದತಾ ಪ್ರಕ್ರಿಯೆಗಳನ್ನು ಈಗಾಗಲೇ ವ್ಯವಸ್ಥಿತವಾಗಿ ನಿರ್ವಹಿಸಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ನಿಯೋಜಿತರಾಗಿರುವವರು ಅಂದು ಬೆಳಿಗ್ಗೆ 5 ಗಂಟೆಗೆ ಸರಿಯಾಗಿ ಎಣಿಕೆ ಕೇಂದ್ರದ ಬಳಿ ಇರಬೇಕು. 6.30 ಗಂಟೆಯೊಳಗೆ ಎಣಿಕೆ ಕೇಂದ್ರದೊಳಗೆ ಹಾಜರಾಗಬೇಕು. ಎಣಿಕೆ ಕಾರ್ಯದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಚುನಾವಣಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ಹಾಗೂ ಆದೇಶ ಪತ್ರದೊಂದಿಗೆ ಎಣಿಕೆ ಕೇಂದ್ರಕ್ಕೆ ಆಗಮಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ನಿಯೋಜಿತರಾಗಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದೊಳಗೆ ಕಂಪ್ಯೂಟರ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವಂತಿಲ್ಲ. ಮತ ಎಣಿಕೆ ಕಾರ್ಯದಲ್ಲಿ ಮೊದಲು ಅಂಚೆ ಮತಪತ್ರಗಳ ಎಣಿಕೆ ನಡೆಯಲಿದ್ದು, ಬಳಿಕ ಕಂಟ್ರೋಲ್ ಯೂನಿಟ್ ಯಂತ್ರದಲ್ಲಿನ ಮತ ಎಣಿಕೆ ಪ್ರಾರಂಭವಾಗಲಿದೆ ಎಣಿಕೆ ಕುರಿತು ತಮಗಿರುವ ಸಂಶಯ, ಸಂದೇಹಗಳನ್ನು ಪರಿಹರಿಸಲು ಕಾರ್ಯಾಗಾರ ಆಯೋಜಿಸಲಾಗಿದೆ. ಎಲ್ಲರು ಕಾರ್ಯಾಗಾರದ ಸದುಪಯೋಗವನ್ನು ಪಡೆದು ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯಕ್ಕೆ ನೇಮಿಸಲಾಗಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗೆ ಅನುಕೂಲವಾಗುವಂತೆ ಆಯಾ ತಾಲೂಕು ಕೇಂದ್ರದಿಂದ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್.ಡಿ. ಕೋಟೆ ತಾಲೂಕು ಕಚೇರಿಯಿಂದ ಬೆಳಿಗ್ಗೆ 2.30 ಗಂಟೆಗೆ, ಟಿ. ನರಸೀಪುರ ತಾಲೂಕು ಕಚೇರಿಯಿಂದ ಬೆಳಿಗ್ಗೆ 4 ಗಂಟೆಗೆ, ನಂಜನಗೂಡು-ವರುಣ ವ್ಯಾಪ್ತಿಗೆ ನಂಜನಗೂಡು ತಾಲೂಕು ಕಚೇರಿಯಿಂದ ಬೆಳಿಗ್ಗೆ 4 ಗಂಟೆಗೆ,

ಹನೂರು ಭ್ರಮರಾಂಭ ಚಿತ್ರಮಂದಿರದಿಂದ ಬೆಳಿಗ್ಗೆ 3.30 ಗಂಟೆಗೆ, ಗುಂಡ್ಲುಪೇಟೆ ತಾಲೂಕು ಕಚೇರಿಯಿಂದ ಬೆಳಿಗ್ಗೆ 4 ಗಂಟೆಗೆ ಹಾಗೂ ಕೊಳ್ಳೇಗಾಲ ತಾಲೂಕು ಕಚೇರಿಯಿಂದ ಬೆಳಿಗ್ಗೆ 3.30 ಗಂಟೆಗೆ ಬಸ್‍ಗಳು ಹೊರಡಲಿವೆ. ಎಲ್ಲಾ ಅಧಿಕಾರಿ, ನೌಕರರು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.ಚುನಾವಣಾ ತರಬೇತಿ ನೋಡೆಲ್ ಅಧಿಕಾರಿ ಲಿಂಗರಾಜೇ ಅರಸ್ ಅವರು ಕಾರ್ಯಾಗಾರದಲ್ಲಿ ಹಾಜರಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಪವರ್ ಪಾಯಿಂಟ್ ಮೂಲಕ ಎಣಿಕೆ ಕಾರ್ಯದ ವಿವಿಧ ಮಜಲುಗಳು ಹಾಗೂ ಪ್ರಕ್ರಿಯೆಗಳ ಬಗ್ಗೆ ಸುದೀರ್ಘವಾಗಿ ವಿವರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು