LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

 `AI'ಬಳಸಿ ಹುಲಿ ಇದೆ ಎಂದು ಸುಳ್ಳು ಫೋಟೋ, ವಿಡಿಯೋ ಪೋಸ್ಟ್ ಹರಡುವವರ ವಿರುದ್ಧ ಕಾನೂನು ಕ್ರಮ

ಚಾಮರಾಜನಗರ: ಇದೀಗ `AI' ತಂತ್ರಜ್ಞಾನ ಬಳಸಿ ಹುಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಬಿಟ್ಟರೆ, ಫೋಟೋ, ವಿಡಿಯೋ ಶೇರ್ ಮಾಡಿದ್ರೆ ಕಠಿಣ ಕ್ರಮ ಕೈಗೊಳಲಾಗುತ್ತೆ. ಹುಲಿ ಬಂತು ಎಂದು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಕೆಲಸಕ್ಕೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿವೆ. ಅದರಲ್ಲೂ ಹುಲಿ ದಾಳಿ ಮೇಲಿಂದ ಮೇಲೆ ನಡೆಯುತ್ತಿರೋದು ಜನರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಹುಲಿ ಪ್ರತ್ಯಕ್ಷ ಎಂಬ ಎಐ ವಿಡಿಯೋಗಳು ವೈರಲ್ ಆಗುತ್ತಿರೋದು ಸಾರ್ವಜನಿಕರ ನಿದ್ದೆಗೆಡಿಸಿದೆ. ಅರಣ್ಯ ಇಲಾಖೆ ವಿರುದ್ಧ ಆಕ್ರೋಶಕ್ಕೂ ಕಾರಣವಾಗಿದೆ. ಹೀಗಾಗಿ ಹುಲಿಯ ಶೋಧಕ್ಕಿಳಿದ ಅರಣ್ಯ ಇಲಾಖೆ ಶಾಕಿಂಗ್ ಮಾಹಿತಿ ಬಹಿರಂಗಪಡಿಸಿದ್ದು, ಬಹುತೇಕರು ಶೇರ್ ಮಾಡಿರುವ ವಿಡಿಯೋಗಳು ಎಐ ನಿರ್ಮಿತ ಎಂಬುದು ಗೊತ್ತಾಗಿದೆ.

ಹುಲಿ ಬಂತು ಎಂದು ಸುಳ್ಳು ಫೋಟೋ ಹಂಚುವುದರಿಂದ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ. `AI' ಹಾವಳಿಯಿಂದ ಕೆಲಸ ನಿರ್ವಹಿಸಲು ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಕಲ್ಲಹಳ್ಳಿಯಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಇತ್ತೀಚೆಗಷ್ಟೇ ಬರೋಬ್ಬರಿ ೪ ಹುಲಿಗಳನ್ನು ಸೆರೆ ಹಿಡಿದಿದ್ದರು.ಸಾಕಾನೆ ಸಹಾಯದಿಂದ ಮೂರು ಹುಲಿಗಳ ಜತೆಗೆ ತಾಯಿ ಹುಲಿ ಸೆರೆಯಾಗಿತ್ತು.

ಅದಾದ ಬಳಿಕವೂ ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಓಡಾಟ ಮುಂದುವರಿದಿದ್ದು, ಮಂಚಹಳ್ಳಿ ಗ್ರಾಮದಲ್ಲಿ ಶಿವಣ್ಣ ಎಂಬುವರಿಗೆ ಸೇರಿದ ೨ ಹಸುಗಳ ಮೇಲೆ ವ್ಯಾಘ್ರ ದಾಳಿ ನಡೆಸಿತ್ತು.ಜಮೀನಿನಲ್ಲಿ ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು. ಘಟನೆಯಿಂದ ಆತಂಕಗೊಂಡಿರುವ ಮಂಚಹಳ್ಳಿ ನಿವಾಸಿಗಳು, ಜಮೀನುಗಳಿಗೆ ತೆರಳಲು ಹೆದರುತ್ತಿದ್ದಾರೆ.ಕಾಡಂಚಿನ ಬಹುತೇಕ ಗ್ರಾಮಗಳಲ್ಲಿನ ಸ್ಥಿತಿಯೂ ಹೀಗೇ ಇದೆ.ಇಂತಹ ಸಂದರ್ಭದಲ್ಲಿ ಹುಲಿ ಬಂತೆಂದು ಎಐ ವಿಡಿಯೋ, ಫೋಟೋಗಳನ್ನು ಕೆಲ ಕಿಡಿಗೇಡಿಗಳು ಹರಿಬಿಡುತ್ತಿದ್ದು, ಇಂತವರ ವಿರುದ್ಧ ಅರಣ್ಯ ಇಲಾಖೆಯೀಗ ಗರಂ ಆಗಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು