LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೋಷಿಯಲ್ ಮೀಡಿಯಾ ಕಿರುಕುಳಕ್ಕೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಐಶ್ವರ್ಯಾ ಸಿಂಧೋಗಿ

ನಟಿಯರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುವ ಘಟನೆಗಳು ಒಂದರ ಹಿಂದೆ ಒಂದರAತೆ ಬೆಳಕಿಗೆ ಬರುತ್ತಿವೆ. ಇದೀಗ ಸೀರಿಯಲ್ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಐಶ್ವರ್ಯಾ ಸಿಂಧೋಗಿ ಕೂಡ ಅಪರಿಚಿತ ವ್ಯಕ್ತಿಯಿಂದ ನಿರಂತರ ಕಿರುಕುಳವಾಗುತ್ತಿದೆ ಎಂದು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಳೆದ ಎರಡು ತಿಂಗಳಿಂದ ಫೇಕ್ ಅಕೌಂಟ್‌ಗಳ ಮೂಲಕ ಅವಹೇಳನಕಾರಿ ಕಾಮೆಂಟ್, ಮಾನಹಾನಿಯಾಗುವಂತಹ ಮೆಸೇಜ್‌ಗಳು ಮತ್ತು ನಿಂದನಾತ್ಮಕ ಪೋಸ್ಟ್ಗಳನ್ನು ಮಾಡಲಾಗುತ್ತಿದೆ ಎಂದು ಐಶ್ವರ್ಯಾ ದೂರಿನಲ್ಲಿ ಆರೋಪಿಸಿದ್ದಾರೆ. ಇದರಿಂದ ತಮ್ಮ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಇದಕ್ಕೂ ಮೊದಲು 2022ರಲ್ಲೂ ಇದೇ ರೀತಿಯ ಕಿರುಕುಳ ಎದುರಿಸಿದ್ದಾಗಿ ಐಶ್ವರ್ಯಾ ಹೇಳಿದ್ದಾರೆ. ಆಗಲೂ ಕರೆ ಮಾಡುವುದು, ಹಿಂಬಾಲಿಸುವುದು ಸೇರಿದಂತೆ ಹಲವು ರೀತಿಯಲ್ಲಿ ತೊಂದರೆ ನೀಡಲಾಗಿತ್ತು. ಆ ಪ್ರಕರಣದಲ್ಲೂ ಸಂಜಯನಗರ ಠಾಣೆಗೆ ದೂರು ದಾಖಲಾಗಿತ್ತು ಎನ್ನಲಾಗಿದೆ.ಈ ಬಾರಿಯೂ ಪರಿಚಯದ ವ್ಯಕ್ತಿಯೇ ಬೇರೆ ಹೆಸರಿನಲ್ಲಿ ಫೇಕ್ ಅಕೌಂಟ್ ತೆರೆದು ಕಿರುಕುಳ ನೀಡುತ್ತಿರುವ ಅನುಮಾನವನ್ನು ನಟಿ ವ್ಯಕ್ತಪಡಿಸಿದ್ದಾರೆ. ದೂರಿನಲ್ಲಿ ಶ್ರೀಮತಿ ಮನ್ನತ್ ನಕುಲ್ ಎಂಬ ಹೆಸರನ್ನೂ ಉಲ್ಲೇಖಿಸಿದ್ದು, ಇದೇ ವ್ಯಕ್ತಿ ಬೇರೆ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುತ್ತಿರುವ ಶಂಕೆ ವ್ಯಕ್ತಪಡಿಸಿದ್ದಾರೆ.ರಮ್ಯಾ, ರುಕ್ಮಿಣಿ ವಸಂತ್ ಸೇರಿದಂತೆ ಹಲವು ನಟಿಯರು ಸೋಷಿಯಲ್ ಮೀಡಿಯಾ ಕಿರುಕುಳದ ಬಗ್ಗೆ ದೂರು ನೀಡಿದ ಘಟನೆಗಳ ನಡುವೆಯೂ ಇಂತಹ ಪ್ರಕರಣಗಳು ಮುಂದುವರಿಯುತ್ತಿರುವುದು ಆತಂಕ ಮೂಡಿಸಿದೆ. ಸದ್ಯ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು