LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜನ್ಮದಿನದ ಸಂಭ್ರಮದಲ್ಲಿ ಅಜಯ್ ರಾವ್....ಯುದ್ಧಕಾಂಡ ಫಸ್ಟ್ ಲುಕ್ ರಿಲೀಸ್...

ಜನ್ಮದಿನದ ಸಂಭ್ರಮದಲ್ಲಿ ಲಾಯರ್ ಅವತಾರ ತಾಳಿದ ಅಜಯ್...ಯುದ್ಧಕಾಂಡ ಫಸ್ಟ್ ಲುಕ್ ಅನಾವರಣಸ್ಯಾಂಡಲ್‍ವುಡ್ ನಟ ಅಜಯ್ ರಾವ್ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ.

ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್ ರಾವ್ ಹುಟ್ಟುಹಬ್ಬದ ವಿಶೇಷವಾಗಿ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಶುಭ ಕೋರಲಾಗಿದೆ.ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ.

ಯುದ್ಧಕಾಂಡ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಮತ್ತು ಅಜಯ್ ರಾವ್      ಪ್ರೊಡಕ್ಷನ್ಸ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಚಿತ್ರಕ್ಕೆ ಪವನ್ ಭಟ್ ಆಕ್ಷನ್ ಕಟ್ ಹೇಳುತ್ತಿದ್ದು ಕಾರ್ತಿಕ್ ಶರ್ಮಾ ಕ್ಯಾಮೆರಾ ಕೈಚಳಕವಿದೆ. ಬಹುಭಾಷೆಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ತಾರಾಬಳಗವಿರಲಿದೆ. ಸದ್ಯ ಯುದ್ಧಕಾಂಡ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ಮತ್ತೊಂದು ಅಪ್ಡೇಟ್ ನೊಂದಿಗೆ ಚಿತ್ರತಂಡ ನಿಮ್ಮ ಮುಂದೆ ಹಾಜರಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು