LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಹಿತ್ ಶರ್ಮಾಗೆ ಪ್ರಶಸ್ತಿಯನ್ನು ಅರ್ಪಿಸಿದ ಆಕಾಶ್ ಮಧ್ವಾಲ್

ಮುಂಬೈ: ಐಪಿಎಲ್ 2024 ರಲ್ಲಿ ಕಳೆದ ಪಂದ್ಯದಲ್ಲಿ ಶ್ರೇಷ್ಠ ಬೌಲಿಂಗ್ ಮಾಡಿದ್ದಕ್ಕಾಗಿ ತಂಡದೊಳಗೇ ನೀಡಲಾಗಿದ್ದ ಪ್ರಶಸ್ತಿಯನ್ನು ವೇಗಿ ಆಕಾಶ್ ಮಧ್ವಾಲ್ ಮಾಜಿ ನಾಯಕ ರೋಹಿತ್ ಶರ್ಮಾಗೆ ಅರ್ಪಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಕಳೆದ ಪಂದ್ಯದಲ್ಲಿ ಸೋತ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಮೀಟಿಂಗ್ ವೇಳೆ ಆಕಾಶ್ ಶ್ರೇಷ್ಠ ಪ್ರದರ್ಶನಕ್ಕೆ ಪ್ರಶಸ್ತಿ ನೀಡಲಾಯಿತು.ಪ್ರತೀ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ಈ ರೀತಿ ಉತ್ತಮ ಪ್ರದರ್ಶನ ನೀಡಿದವರಿಗೆ ಪ್ರಶಸ್ತಿ ನೀಡುವ ಪರಿಪಾಠವಿದೆ.
ಈ ಪಂದ್ಯದಲ್ಲಿ ಆಕಾಶ್ 3 ವಿಕೆಟ್ ಕಬಳಿಸಿದ್ದರು.

ತಂಡದ ಮೀಟಿಂಗ್ ವೇಳೆ ಮಾಲಕಿ ನೀತಾ ಅಂಬಾನಿ ಮತ್ತು ಪುತ್ರ ಆಕಾಶ್ ಅಂಬಾನಿ ಮಾತನಾಡಿದ್ದರು. ಈ ವೇಳೆ ತಂಡದ ಪ್ರದರ್ಶನದ ಬಗ್ಗೆ ವಿಮರ್ಶಿಸಿ, ಆಟಗಾರರನ್ನು ಹುರಿದುಂಬಿಸಿದರು. ಈ ವೇಳೆ ಆಕಾಶ್ ಗೆ ಉತ್ತಮ ಪ್ರದರ್ಶನಕ್ಕೆ ಪ್ರಶಸ್ತಿ ನೀಡಲಾಯಿತು.ಈ ವೇಳೆ ಧನ್ಯವಾದ ಸಲ್ಲಿಸಿದ ಆಕಾಶ್ ಅಂಬಾನಿಯವರ ಎದುರೇ ರೋಹಿತ್ ಶರ್ಮಾಗೆ ಪ್ರಶಸ್ತಿ ಅರ್ಪಿಸಿದರು.

ಯುವ ವೇಗಿ ಆಕಾಶ್ ಮಧ್ಯವಾಲ್ ಕಳೆದ ವರ್ಷ ಐಪಿಎಲ್ ನಲ್ಲಿ ಚಿಗುರಿದ ಪ್ರತಿಭೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಬಲ ನೀಡಿದ ಬೌಲರ್. ರೋಹಿತ್ ಶರ್ಮಾ ಈ ಯುವ ವೇಗಿಗೆ ಅವಕಾಶ ನೀಡಿದ್ದರು. ಹೀಗಾಗಿ ತಮಗೆ ಅವಕಾಶ ಕೊಟ್ಟ ಮೊದಲ ನಾಯಕನಿಗೆ ಪ್ರಶಸ್ತಿ ಅರ್ಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು