LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆ.30 ರಿಂದ ಮೂರು ದಿನಗಳ ಕಾಲ `ಅಕ್ಕ' ಸಮ್ಮೇಳನ

ಬೆಂಗಳೂರು: ಮುಂದಿನ ಆಗಸ್ಟ್ 30ರಿಂದ ಸೆಪ್ಟಂಬರ್ 1ರವರೆಗೆ ಮೂರು ದಿನಗಳ ಕಾಲ ಅಮೆರಿಕಾ ವರ್ಜೀನಿಯಾ ರಾಜ್ಯದ ರಿಚ್‍ಮಂಡ್ ನಗರದಲ್ಲಿ 12ನೇ `ಅಕ್ಕ' ವಿಶ್ವ ಸಮ್ಮೇಳನ ನಡೆಯಲಿದೆ.ಅದ್ಧೂರಿಯಾಗಿ ನಡೆಯಲಿದೆ.ಕಾರ್ಯಕ್ರಮವನ್ನು ಅದ್ಧೂರಿಯಾಗಿ `ನಡೆಸಲಾಗುವುದು ಎಂದು `ಅಮೆರಿಕ ಕನ್ನಡ ಕೂಟಗಳ ಒಕ್ಕೂಟ'ದ (ಅಕ್ಕ) ಅಧ್ಯಕ್ಷ ರವಿ ಬೋರೇಗೌಡ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಒಟ್ಟು 42 ಅಮೆರಿಕ ಕನ್ನಡ ಸಂಘಗಳು ಸೇರಿ ಈ ವಿಶಿಷ್ಟ ಕಾರ್ಯ ಕ್ರಮ ಆಯೋಜಿಸುತ್ತಿವೆ. ಸಮ್ಮೇಳನದಲ್ಲಿ ಎಲ್ಲಾ ವಯೋಮಾನ ದವರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ವಿಜೇತರಿಗೆ ಕರ್ನಾಟಕದಿಂದ ಆಗಮಿಸುವ ಗಣ್ಯರಿಂದ ಬಹುಮಾನ ವಿತರಿಸಲಾಗುವುದು ಎಂದು ವಿವರ ನೀಡಿದರು.

ಕನ್ನಡ ನಾಡಿನ ಕಲೆ, ಸಂಸ್ಕೃತಿಯ ವಿವಿಧ ಮಾದರಿಯ ವಸ್ತ ಮಾದರಿ ಪ್ರದರ್ಶನ (ಫ್ಯಾಷನ್ ಶೋ), ಅಮೆರಿಕ ಮತ್ತು ಕರ್ನಾಟಕದ ಸಾಹಿತಿಗಳ ನಡುವೆ ಸಮ್ಮಿಲನ ಹಾಗೂ ಸಾಹಿತ್ಯ ವಿಚಾರಗೋಷ್ಠಿಗಳು ಜರುಗಲಿವೆ. ಅಮೆರಿಕ, ಭಾರತಮತ್ತು ಕರ್ನಾಟಕದ ವಿವಿಧ ಇಲಾಖೆಗಳ ಮಳಿಗೆಗಳು ಪ್ರದರ್ಶನಗೊಳ್ಳಲಿವೆ. ಪ್ರತಿದಿನ ಕರ್ನಾಟಕದ ಜಾನಪದ, ಸಾಹಿತ್ಯ, ಸಿನಿಮಾ ಕುರಿತಾದ ಸಂಗೀತ ಕಾರ್ಯಕ್ರಮಗಳು,ಖ್ಯಾತ ಗಾಯಕ ರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ನವೀನ್ ಸಜ್ಜು. ಅನುರಾಧಾಭಟ್ ಮತ್ತು ಅವರತಂಡದಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ವಾಣಿಜ್ಯೋದ್ಯಮಿಗಳಿಗೆ ಅಲ್ಲಿ ಉದ್ಯಮ ಆರಂಭಿಸಲು ಮತ್ತು ಕೆಲಸ ನಿರ್ವಹಿಸಲು ಇರುವ ಅವಕಾಶಗಳ ಕುರಿತು ಆಸಕ್ತ ಕನ್ನಡಿಗರಿಗಾಗಿ ವಿಶೇಷ ಬಿಸಿನೆಸ್‍ಫೋರಂ ಮೂಲಕ ಚರ್ಚೆ ನಡೆಸಲಾಗುತ್ತದೆ. ಮೂರು ದಿನಗಳ ಸಮ್ಮೇಳನದಲ್ಲಿ ಕನ್ನಡ ನಾಡಿನ ವಿಶಿಷ್ಟ ಭಕ್ಷ ಭೋಜನ ಸವಿಯುವ ಅವ ಅವಕಾಶ ಲಭಿಸಲಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಎಲ್ಲ ಮಾದರಿಯ ಊಟವನ್ನು ಪ್ರಸಿದ್ದ ಅಡುಗೆ ತಯಾರಕರು ತಯಾರಿಸಿ ಬಡಿಸಲಿದ್ದಾರೆ ಎಂದರು.

ಯುವಕ, ಯುವತಿ ಯರಿಗಾಗಿ ವಿಶೇಷ ಕ್ರೀಡಾ ಸ್ಪರ್ಧೆಗಳು, ತಂತ್ರಜ್ಞಾನ ಕುರಿತು ಚರ್ಚೆ, ಆರೋಗ್ಯ, ಶಿಕ್ಷಣ, ಆಯುಷ್ ಮತ್ತು ಕನ್ನಡಿಗರ ಸಾಮಾಜಿಕ ಸಮಸ್ಯೆಗಳ ಕುರಿತು ಸಂವಾದ ನಡೆಯಲಿದೆ.ಕನ್ನಡ ಕಲಾವಿದರ ಚಿತ್ರಗಳು, ಶಿಲ್ಪಿಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ಕರ್ನಾಟಕದ ಪಾರಂಪರಿಕ ನೃತ್ಯ ರೂಪಗಳು, ಯಕ್ಷಗಾನ, ಡೊಳ್ಳು ಕುಣಿತ ಮತ್ತು ವೀರಗಾಸೆ ಪ್ರದರ್ಶನ ಇರಲಿದೆ. . ಅಕ್ಕ ಸಮ್ಮೇಳನದ ರಾಯಭಾರಿಯೂ ಆಗಿದ್ದ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಅವರಿಗೆ ಸಮರ್ಪಿತ ವಿಶೇಷ 'ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಅಕ್ಕ ಕಾರ್ಯದರ್ಶಿ ಮಾದೇಶ ಬಸವರಾಜು, ಖಜಾಂಚಿ ನಾಗಶಂಕರ್ ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು