LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸರ್ವ ಸ್ನೇಹಿ ಬಜೆಟ್ 2024-25ನೇ ಸಾಲಿನ ಆಯವ್ಯಯ ಮಂಡನೆ ಮಾಡಿದ ಮುಖ್ಯಮಂತ್ರಿ

ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟು ಕೊಂಡು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕದಂತೆ ಮುನ್ನೆಚ್ಚರಿಕೆ ವಹಿಸಿರುವ ಬಜೆಟ್ ಇದಾಗಿದ್ದು, ಹಲವು ಮಹತ್ವದ ಹೊಸ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ರಾಜ್ಯದ ಒಟ್ಟು ಬಜೆಟ್ ಗಾತ್ರ 3,71,383 ಕೋಟಿ ಇದೆ. ಆಯವ್ಯಯ ಪುಸ್ತಕ ಒಟ್ಟು 181 ಪುಟಗಳಿಂದ ಕೂಡಿದೆ.ಬಜೆಟ್ ಭಾಷಣದ ಆರಂಭದಲ್ಲಿ ಮುಖ್ಯಮಂತ್ರಿಗಳು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ್ದ ಸಂವಿಧಾನದ ಆಶಯದಂತೆ ನ್ಯಾಯ ಸಮಾನತೆ ಹಾಗೂ ಬಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ಸ್ಥಾಪಿಸುವುದು ರೂಪಿಸಲು ನಾವು ಹೆಜ್ಜೆ ಇಟ್ಟಿದ್ದೇವೆ ಎಂದಿದ್ದಾರೆ.

ಸಾಮಾಜಿಕ ನ್ಯಾಯ ಎಂದು ನಮ್ಮ ನಂಬಿಕೆ ಮಾತ್ರವಲ್ಲ. ಅದು ಉದಾತ್ತ ಜೀವನ. ದೃಷ್ಠಿಕೋನ, ಸಮಸಮಾಜ ನಿರ್ಮಾಣದಲ್ಲಿ ಬಸವಾಧಿ ಶರಣರ ಕಾಯಕ ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿವೆ ಎಂದಿರುವ ಅವರು, ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕು ಎಂದು ಶರಣರ ಚಿಂತನೆ ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ ಎಂದು ತಿಳಿಸಿದ್ದಾರೆ.

ಆರಂಭದಲ್ಲಿಯೇ ವರನಟ ಡಾ. ರಾಜ್‍ಕುಮಾರ್ ಅವರು ನಟಿಸಿರುವ ಬಂಗಾರದ ಮನುಷ್ಯದ ಚಿತ್ರದ ಆರ್.ಎನ್. ಜಯಗೋಪಾಲ್ ಅವರ ರಚನೆಯಆಗದು ಎಂದು ಕೈಕಟ್ಟಿ ಕುಳಿತರೆ..ಸಾಗದು ಕೆಲಸವು ಮುಂದೆ..ಮನಸೊಂದಿದ್ದರೆ ಮಾರ್ಗವುಂಟು...
ಕೆಚ್ಚೆದೆಯಿರಬೇಕೆಂದು.... ಹಾಡನ್ನು ಪ್ರಸ್ತಾಪಿಸಿ ದೇಶದ ಯಾವುದೇ ಸರ್ಕಾರ ಜಾರಿಗೊಳಿಸದ ಅತ್ಯಂತ ಬೃಹತ್ ಪ್ರಮಾಣದ ನೇರ ನೆರವು ನೀಡುವ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಶ್ರೇಯ ನಮ್ಮದಾಗಿದೆ ಎಂದು ಹೇಳಿದ ಅವರು, ನಮ್ಮ ಮಹತ್ವಾಕಾಂಕ್ಷಿಯ ಗ್ಯಾರಂಟಿಗಳು ಜನರ ಆಶೋತ್ತರಗಳನ್ನು ಆಧರಿಸಿವೆ ಎಂದು ಭಾಷಣದಲ್ಲಿ ಪ್ರಸ್ತಾಪಿಸಿದರು.

ಡಾ.ಜಿ.ವೈ. ಪದ್ಮನಾಗರಾಜು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು