LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್ ಯಶಸ್ವಿ

ಬೆಂಗಳೂರು: ಆಭರಣ ಟೈಮ್ ಲೆಸ್ಜ್ಯುವೆಲ್ಲರಿ ಪ್ರಾಯೋಜಿತ ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್ ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.

ಕೊಡಿಯಾಲ್ ಸ್ಪೋರ್ಟ್ ಅಸೋಸಿಯೇಷನ್, ಕಿಂಗ್ಸ್ ಚೆಸ್ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಶನ್ ಜಂಟಿಯಾಗಿ ಆಯೋಜಿಸಿದ ಚೆಸ್ ಸ್ಪರ್ಧಾಕೂಟದಲ್ಲಿ 6 ರಿಂದ 67 ವರ್ಷ ವಯೋಮಾನದ ಚೆಸ್ ಆಟಗಾರರು ಭಾಗವಹಿಸಿದರು.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ ಸಹಿತ ದೇಶದ ವಿವಿಧ ಭಾಗಗಳಿಂದ ಒಟ್ಟು 120 ಸ್ಪರ್ಧಾಳುಗಳು ಪಾಲ್ಗೊಂಡರು. ಫೀಡೆ ಫ್ಲೇಯರ್ ರೇಟಿಂಗ್ ಹೊಂದಿರುವ 16 ಆಟಗಾರರು ಸೇರಿ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ 26 ಆಟಗಾರರು ಭಾಗವಹಿಸಿ ತಮ್ಮ ನೈಪುಣ್ಯತೆಯನ್ನು ಮೆರೆದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಆಭರಣ್ ಟೈಮ್ ಲೆಸ್ ಜ್ಯುವೆಲ್ಲರಿ ಎಂಡಿ ಡಾ. ಪ್ರತಾಪ್ ಕಾಮತ್ ಇಂತಹ ಸ್ಪರ್ಧಾಕೂಟದ ಪ್ರಾಯೋಜಕತ್ವ ವಹಿಸಿರುವುದು ನಮ್ಮ ಸಂಸ್ಥೆಗೆ ಖುಷಿಯ ವಿಷಯ. ಚೆಸ್ ಆಟಕ್ಕೆ ಆಟಗಾರರಿಂದ ಇಷ್ಟು ದೊಡ್ಡ ಸ್ಪಂದನೆ ಸಿಕ್ಕಿರುವುದು ಸಂತಸ ತಂದಿದೆ.

ಏಳು ವರ್ಷದ ಕೆಳಗಿನ ಕ್ಯಾಟಗರಿಯಿಂದ ಹಿಡಿದು ಹಿರಿಯರ ತನಕ ಬೇರೆ ಬೇರೆ ವಯೋಮಾನದವರು ಭಾಗವಹಿಸಿ ಕ್ರೀಡಾ ಸ್ಫೂರ್ತಿಯನ್ನು ಮೆರೆದಿರುವುದು ಉತ್ತಮ ಸಂಗತಿ. ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ನಡೆಸುವ ಯಾವುದೇ ಕ್ರೀಡಾಕೂಟ ಬಹಳ ಶಿಸ್ತುಬದ್ಧವಾಗಿ ನಡೆಯುತ್ತದೆ. ಕಾರ್ಯಕ್ರಮ ಉತ್ತಮವಾಗಿ ಮೂಡಿಬರಲು ಶ್ರಮಿಸಿದ ಸರ್ವರಿಗೂ ಅಭಿನಂದನೆಗಳು. ನಮ್ಮ ಸಂಸ್ಥೆಯ ಸಹಕಾರ ಎಂದಿನಂತೆ ಯಾವತ್ತೂ ಇರಲಿದೆ ಎಂದು ತಿಳಿಸಿದರು.

ಹಿರಿಯ ಪತ್ರಕರ್ತ, ರಾಜ್ಯ ಮಾಧ್ಯಮ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿ, ಮಾಧ್ಯಮಗಳಲ್ಲಿ ಕ್ರಿಕೆಟ್ ಆಟಕ್ಕೆ ಸಿಕ್ಕಿದಷ್ಟು ಪ್ರಾಶಸ್ತ್ಯ ಬೇರೆ ಆಟಕ್ಕೆ ಸಿಗುವುದಿಲ್ಲ ಎನ್ನುವ ಆಪಾದನೆಯ ಹೊರತಾಗಿಯೂ ಚೆಸ್ ನಂತಹ ಆಟಗಳಿಗೆ ಇಂತಹ  ಪ್ರೋತ್ಸಾಹ ಸಿಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಉದ್ಯಮಿ ನಾರಾಯಣ ಪೈ ಶುಭ ಹಾರೈಸಿದರು. ಸಿಎ ಜಗನ್ನಾಥ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಂಗಲ್ಪಾಡಿ ನರೇಶ್ ಶೆಣೈ, ದೀಪಾ ಕಾಮತ್, ಚೇತನ್ ಕಾಮತ್, ಪ್ರವೀಣ್ ಕಾಮತ್, ಸಿದ್ಧಾರ್ಥ್ ಪ್ರಭು ಹಾಗೂ ಗಣ್ಯರು ಉಪಸ್ಥಿತರಿದ್ದರು. ನಾಗೇಂದ್ರ ಶೆಣೈ ನಿರೂಪಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು