LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೊಡ್ಡಬಳ್ಳಾಪುರ: ಶ್ರೀ ಶನಿ ಮಹಾತ್ಮಸ್ವಾಮಿಯ 69ನೇ ಬ್ರಹ್ಮರಥೋತ್ಸವಕ್ಕೆ ಸಕಲ ಸಿದ್ದತೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ಮಾ.19ರಂದು ವಿಜೃಂಭಣೆ ಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.

ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ,ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ,

ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ . ಭಕ್ತಾದಿಗಳಿಗೆ ಅನುಕೂಲ ವಾಗುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಎಂದರು.

ನಂತರ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಧರ್ಮದರ್ಶಿ ಕೆ.ವಿ.ಪ್ರಕಾಶ್ ಅವರು ಇದೆಮಾ. 18 ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು ಮಾ. 19ರಂದು ಮಧ್ಯಾನ್ಹ 1.10 ರಿಂದ 1.58ರ ಶುಭಮಿಥುನ ಲಗ್ನದಲ್ಲಿ ಸ್ವಾಮಿಯ ಬ್ರಹ್ಮರಥೋ ತ್ಸವ ಕಾರ್ಯಕ್ರಮ ನೆರವೇರಲಿದೆ.

ಮಾರ್ಚ್ 18 ರಿಂದ ಮಾ.24ರವರೆಗೆಒಂದು ವಾರದ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ,
ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.ಈ ಪತ್ರಿಕಾಗೋಷ್ಠಿಯಲ್ಲಿ ಧರ್ಮದರ್ಶಿ ಎಂ.ಶಿವಣ್ಣ, ವ್ಯವಸ್ಥಾಪಕ ಹನುಮಾನ್ ಸಿಂಗ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು