LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಸಹಕಾರ ಸಂಘದಿಂದ ರೈತರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ’

ಹೊಸಕೋಟೆ: ಸಹಕಾರ ಸಂಘಗಳು ಸದೃಢವಾಗಿದ್ದರೆ ರೈತರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಅವರು ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಲಾಭಾಂಶದಲ್ಲಿ ರೂ. 9.5 ಲಕ್ಷ ವೆಚ್ಚದ ಅಂಗಡಿ ಮಳಿಗೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ ಕಾರಹಳ್ಳಿ ಮತ್ತು ಸಿದ್ದನಹಳ್ಳಿಯಲ್ಲಿ 7 ಲಕ್ಷ ರೂ. ವೆಚ್ಚದÀ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರ ಸಂಘಗಳು ರೈತರ ಅಭ್ಯುದಯಕ್ಕೆ ಸ್ಥಾಪನೆಯಾಗಿದ್ದು, ಸಹಕಾರ ಸಂಘಗಳ ಮುಖೇನ ರೈತರ ಬೇಡಿಕೆಗಳಿಗೆ ಅನುಗುಣವಾಗಿ ಸರಕಾರ ಯೋಜನೆಗಳನ್ನು ರೂಪಿಸಿ ಬಡ ರೈತರ ಕುಟುಂಬಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಸಹಕಾರ ಸಂಘಗಳು ಬಹುಮುಖ್ಯ ಪಾತ್ರವನ್ನು ವಹಿಸಿದೆ ಎಂದರು.

ರೈತ ಕುಟುಂಬಗಳನ್ನು ಆರ್ಥಿಕವಾಗಿ ಸದೃಢರನ್ನಾಗಿಸಿ, ನಮ್ಮ ಬ್ಯಾಂಕ್ ಲಾಭ ಗಳಿಸುವುದರಲ್ಲಿ ಮುಂದಿದೆ. ರೈತರನ್ನು ಶ್ರೇಯೋಭಿವೃದ್ಧಿಗಾಗಿ ಹಲವು ಸವಲತ್ತುಗಳನ್ನು ರೂಪಿಸುತ್ತಿದ್ದು, ಸದಸ್ಯರು ಇದರ ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು. ರೈತರ ಹಿತಕ್ಕಾಗಿ ನೂತನವಾಗಿ ಕಟ್ಟಡ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಬಿ. ಗೋಪಾಲ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ. ರಾಜಶೇಖರಗೌಡ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎನ್. ಮಂಜುನಾಥ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ರವೀಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಗೀರ್ ಅಹಮದ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಚೇಗೌಡ, ಮಾಜಿ ಸದಸ್ಯರಾದ ಬೀರಪ್ಪ, ರಾಮಚಂದ್ರೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಧರ್ಮೇಶ್, ಉದ್ಯಮಿ ಎಂ. ಮಂದೀಪ್‍ಗೌಡ, ಸಂಘದ ಅಧ್ಯಕ್ಷ ಕೆ. ಮಂಜುನಾಥ್, ಉಪಾಧ್ಯಕ್ಷ ಎನ್. ಮಂಜುನಾಥ್, ಮುಖ್ಯ ಕಾರ್ಯನಿರ್ವಾಹಕ ಗುರುದೇವ್,

ನಿರ್ದೇಶಕರಾದ ಎನ್.ಡಿ. ರಮೇಶ್, ಎಸ್. ಮಂಜುನಾಥ್, ಹೆಚ್.ಕೆ. ನಾರಾಯಣಗೌಡ, ಎಸ್.ಬಿ.ಟಿ. ಬೈರೇಗೌಡ, ಶ್ರೀನಿವಾಸ್, ರವಿಶಂಕರ್, ಟಿ. ಮುನಿರಾಜು, ಎ.ಆರ್. ಕೃಷ್ಣಪ್ಪ, ಜಯಮ್ಮ, ಲಕ್ಷ್ಮೀದೇವಮ್ಮ, ಮುನಿನಾರಾಯಣಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಲೋಕೇಶ್, ಸದಸ್ಯರಾದ ಸೊಣ್ಣೇಗೌಡ, ಹೆಚ್.ಡಿ. ಮಧು, ಹೆಚ್.ಎಂ. ಮೂರ್ತಿ, ಸಲೀಂ, ಕರಗೇಗೌಡ, ಶಿಲ್ಪಶ್ರೀ ಮುನಿರಾಜು, ಸರೋಜಮ್ಮ ಜಯರಾಮ್, ರುಕ್ಮಣಿ ಮಂಜುನಾಥ್ ಹಾಗೂ ಗ್ರಾಮಸ್ಥರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು