LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬಿಯರ್ ಕಾರ್ಖಾನೆಯಲ್ಲಿ ಕಾರ್ಮಿಕರ ಶೋಷಣೆ: ಅರೋಪ

ತಿ.ನರಸೀಪುರ: ಎಬಿ ಇನ್ ಬಿಇವಿ ಉತ್ಪನ್ನ ಬಿಯರ್ ಕಾರ್ಖಾನೆಯಲ್ಲಿ ಕಾರ್ಮಿಕರ ಶೋಷಣೆ ಹಾಗೂ ದಲಿತ ಕಾರ್ಮಿಕರನ್ನು ತೆಗೆದು ಅಕ್ರಮವಾಗಿ ನೀರು ಸರಬರಾಜು ಮಾಡಿಕೊಳ್ಳುತ್ತಿದ್ದಾರೆಂದು ದಸಂಸ ತಾಲೂಕು ಸಂಚಾಲಕ ಕುಕ್ಕೂರು ರಾಜು ಆರೋಪ ಮಾಡಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ತಾಲೂಕಿನ ಮಲಿಯೂರು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಬಿಯರ್ ಫ್ಯಾಕ್ಟರಿಯಲ್ಲಿ ಕಾರ್ಮಿಕರನ್ನು ಹನ್ನೆರೆಡು ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿದ್ದಾರೆ. ಹೆಚ್ಚಿನ ಸಮಯ ದುಡಿದ ಕೆಲಸಕ್ಕೆ ಒಟಿ ನೀಡುತ್ತಿಲ್ಲ. ಪ್ರಶ್ನೆ ಮಾಡಿದವರನ್ನು ಕಾರಣವಿಲ್ಲದೇ ಏಕಾಏಕಿ ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂದು ದೂರಿದರು.

ಕಾನೂನಿಗನುಗುಣವಾಗಿ ಫ್ಯಾಕ್ಟರಿ ನಿಯಮಾನುಸಾರ ನಡೆಸುತ್ತಿಲ್ಲ, ಈಗಾಗಲೇ ಅನೇಕ ದಲಿತ ಕಾರ್ಮಿಕರನ್ನು ತೆಗೆದು ಹಾಕಿದ್ದು ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ, ಬಿಯರ್ ತಯಾರಿಸಲು ಉಪಯೋಗಿಸುವ ಉತ್ಪನ್ನಗಳನ್ನು ಡಿಸ್ಪ್ಲೇ ಕೂಡ ಮಾಡಿಲ್ಲ ಹಾಗೂ ಬಹು ಮುಖ್ಯವಾಗಿ ಕೃಷಿಗೆ ಬಳಸಲಾಗುತ್ತಿರುವ ರೈತರ ಪಂಪ್‍ಸೆಟ್‍ನಿಂದ ಹಣ ಕೊಟ್ಟು ನೂರಾರು ಟ್ಯಾಂಕರ್‍ಗಳಿಂದ ನೀರನ್ನು ಅಕ್ರಮವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದರು.

ಪರಿಸರಕ್ಕೆ ಹಾನಿ: ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ಕಾರ್ಮಿಕ ಇಲಾಖೆ ಬಿಯರ್ ಫ್ಯಾಕ್ಟರಿ ಅವರು ಮಾನದಂಡಗಳನ್ನು ಗಾಳಿಗೆ ತೂರಿ ಪರಿಸರಕ್ಕೆ ಹಾನಿಯುಂಟು ಮಾಡುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳದಿದ್ದರೆ ಬಿಯರ್ ಫ್ಯಾಕ್ಟರಿ ಮುಂಭಾಗ ದಸಂಸ ಪ್ರತಿಭಟನಾ ಧರಣಿ ನಡೆಸುತ್ತದೆಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ಹ್ಯಾಕನೂರು ರಾಜಪ್ಪ, ರಂಗಸಮುದ್ರ ನಂಜುಂಡ, ದೇವರಾಜು, ಯಾಚೇನಹಳ್ಳಿ ಚಿನ್ನಸ್ವಾಮಿ, ಹಿರಿಯೂರು ನಾಗರಾಜು ಇದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು