LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆಸ್ಪತ್ರೆಯಲ್ಲಿ ಚಿನ್ನದ ಸರ ಕಳವು: ಆರೋಪ

ಬೆಂಗಳೂರು: ಚಿಕಿತ್ಸೆಗೆ ಎಂದು ತೆರಳಿದ್ದ ಮಹಿಳೆಯ ಚಿನ್ನದ ಸರ ಕಳವು ಮಾಡಿದ ಆರೋಪದಡಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ರಾಜೇಶ್ವರಿ ಎಂಬ ಮಹಿಳೆಯ ಸರ ಕಳುವು ಮಾಡಿರುವ ಆರೋಪದಡಿ ಮೂಡಲಪಾಳ್ಯದ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ದೂರುದಾರೆ ರಾಜೇಶ್ವರಿ ಅವರಿಗೆ ಫೆಬ್ರವರಿ 8ರಂದು ತೀವ್ರತರದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾತ್ರಿ ತಮ್ಮ ಪತಿಯೊಂದಿಗೆ ಮೂಡಲಪಾಳ್ಯದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ, ಕರ್ತವ್ಯದಲ್ಲಿದ್ದ ವೈದ್ಯರು ತಪಾಸಣೆ ನಡೆಸಿ ಇಸಿಜಿ ಮಾಡಿಸಲು ಸೂಚಿಸಿದ್ದರು. ಇಸಿಜಿ ಮಾಡುವ ಮುನ್ನ ಮಾಂಗಲ್ಯ ಸರ ಬಿಚ್ಚಿ ತಮ್ಮ ಪತಿಯ ಕೈಗೆ ನೀಡಲು ರಾಜೇಶ್ವರಿ ಅವರನ್ನು ತಡೆದಿದ್ದ ನರ್ಸ್, ದಿಂಬಿನ ಕೆಳಗಿರಿಸಲು ಸೂಚಿಸಿದ್ದರು ಎಂದು ಆರೋಪಿಸಲಾಗಿದೆ.

ತಪಾಸಣೆ ಮುಗಿದ ನಂತರ ಸರ ಮರೆತಿದ್ದ ರಾಜೇಶ್ವರಿ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಸ್ನಾನ ಮಾಡುವಾಗ ಮಾಂಗಲ್ಯ ಸರವನ್ನ ರಾತ್ರಿ ಆಸ್ಪತ್ರೆಯಲ್ಲಿ ಬಿಟ್ಟು ಬಂದಿರುವುದು ನೆನಪಾಗಿದೆ. ತಕ್ಷಣ ಆಸ್ಪತ್ರೆಗೆ ಹೋಗಿ ಚಿನ್ನದ ಸರದ ಬಗ್ಗೆ ವಿಚಾರಿಸಿದಾಗ, ಆಸ್ಪತ್ರೆಯವರಿಂದ ಚಿನ್ನದ ಸರ ಇಲ್ಲ ಎಂದು ಬೇಜವಾಬ್ದಾರಿ ಉತ್ತರ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆಸ್ಪತ್ರೆಯ ಇಬ್ಬರು ನರ್ಸ್ ಹಾಗೂ ಸ್ವೀಪರ್ ವಿರುದ್ಧ ಅನುಮಾನ ಇರುವುದಾಗಿ ಆರೋಪಿಸಿರುವ ರಾಜೇಶ್ವರಿ, ಗೋವಿಂದರಾಜ ನಗರ ಠಾಣೆಗೆ ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು