LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಅಂಬೇಡ್ಕರ್ ಆಶಯವನ್ನು ಜೀವಂತವಾಗಿರಿಸಲು ಶ್ರಮಿಸಬೇಕು'

ಕೆ.ಆರ್.ಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವನ್ನು ಜೀವಂತವಾಗಿರಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ರಿಪಬ್ಲಿಕನ್ ಸೇನಾ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಆನಂದ್ ರಾಜ್ ಅಂಬೇಡ್ಕರ್ ಅವರು ಹೇಳಿದರು.
ಕೆ.ಆರ್.ಪುರ ಸಮೀಪದ ವೈಟ್ ಫಿಲ್ಢ್ ನ ವಿಜಯನಗರದಲ್ಲಿರುವ ಭೀಮ್ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫಿಲ್ಢ್ ಮುರುಗೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಉಚಿತ ಕ್ಯಾಂಟಿನ್ ಭೇಟಿ ನೀಡಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶವನ್ನು ಕಲ್ಪಿಸಿ ನಿರಂತರವಾಗಿ ತುಳಿತಕ್ಕೊಳಗಾದವರ ಪರವಾಗಿ ಜೀವನದುದ್ದಕ್ಕೂ ಕೊನೆಯುಸಿರು ಇದುವರೆಗೆ ಹೋರಾಡಿದ ವಿಶ್ವ ಮಾನವರಾಗಿದ್ದಾರೆ. ಅವರ ಆದರ್ಶ ಜೀವನ ಸಿದ್ದಾಂತವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.
ಬಡವರ ಹಸಿವು ನೀಗಿಸಲು ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಹಲವು ವರ್ಷಗಳಿಂದ ಉಚಿತ ಕ್ಯಾಂಟಿನ್ ನಡೆಸುವ ಮೂಲಕ ಮಹತ್ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಈ ರೀತಿಯ ಕ್ಯಾಂಟಿನ್ ಗಳು ಎಲ್ಲಾ ಕಡೆ ತೆರೆಯುವ ಮೂಲಕ ಬಡವರ ಹಸಿವು ನೀಗಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ದೇಶದ ಅತಿ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಭೀಮ್ ಪ್ರಜಾ ಸಂಘವು ಹಲವಾರು ವರ್ಷಗಳಿಂದ ಸತತವಾಗಿ ಹೋರಾಟ ಮಾಡಿಕೊಂಡು ಬರುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿಮೆ ನಿರ್ಮಾಣ ಮಾಡಲು ಗಮನ ಹರಿಸಬೇಕು. ರಾಜ್ಯದಲ್ಲಿ ಅತಿ ಎತ್ತರದ ಪ್ರತಿಮೆ ನಿರ್ಮಾಣ ಆಗಬೇಕೆಂಬ ಮಹಾದಾಸೆ ಇದೆ ಎಂದು ಹೇಳಿದರು.
ಭೀಮ್ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫಿಲ್ಢ್ ಮುರುಗೇಶ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರು ನಾವು ನಡೆಸಿಕೊಂಡು ಬರುತ್ತಿರುವ ಉಚಿತ ಕ್ಯಾಂಟಿನ್ ಅನ್ನು ಸಾಮಾಜೀಕ ಜಾಲತಾಣದಲ್ಲಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಇಲ್ಲಿಗೆ ಬಂದು ವೀಕ್ಷಣೆ ಮಾಡಿದ್ದು ಜೀವನ ಸಾರ್ಥಕವೆನಿಸಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕ್ಯಾಂಟಿನ್ ನಡೆಸಲು ಸಹಕಾರ ನೀಡುತ್ತೇನೆ ಯಾವುದೇ ಕಾರಣಕ್ಕೆ ಮುಚ್ಚದೆ ಅಂಬೇಡ್ಕರ್ ಹೆಸರಿನಲ್ಲಿ ಸೇವಾ ಕಾರ್ಯ ನೀಡುವಂತೆ ಅಭಯ ನೀಡಿದ್ದಾರೆ. ನನ್ನ ಕೆಲಸವನ್ನು ಮೆಚ್ಚಿ ದಕ್ಷಿಣ ಭಾರತದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಸಮರ್ಥವಾಗಿ ಅಧಿಕಾರವನ್ನು ನಿಭಾಯಿಸುತ್ತೇನೆ ಎಂದರು.
ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ, ರಿಪಬ್ಲಿಕನ್ ಸೇನಾ ಪಕ್ಷದ ರಾಜ್ಯಾಧ್ಯಕ್ಷ ಪ್ರಜ್ವಲ್, ಜಬಿ ಹುಸೇನ್, ರಮೇಶ್, ರಾಜಣ್ಣ, ಬಿ.ಕೃಷ್ಣಪ್ಪ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು