LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಾಳೆ ಬಿಎಸ್‌ವೈ ಅಭಿಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ

ಬೆಂಗಳೂರು: ರಾಜಕಾರಣದಲ್ಲಿ ಸಾರ್ಥಕ 50 ವರ್ಷಗಳ ಪೂರೈಕೆ ಹಿನ್ನೆಲೆಯಲ್ಲಿ ನಾಳೆ ಬಿ.ಎಸ್. ಯಡಿಯೂರಪ್ಪರಿಗೆ "ಅಭಿಮಾನೋತ್ಸವ" ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಮಂಡಳಿಯ ಸದಸ್ಯರು ಆಗಿರುವ ಬಿ.ಎಸ್.ಯಡಿಯೂರಪ್ಪ ಅವರು ಸಾರ್ಥಕ 50 ವರ್ಷ ರಾಜಕಾರಣದಲ್ಲಿ ಪೂರೈಕೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಾಳೆ ಕಾರ್ಯಕ್ರಮಕ್ಕೆ ಈಗಾಗಲೇ 10 ದಿನಗಳ ಹಿಂದೆಯಿAದಲೇ ವೇದಿಕೆ ನಿರ್ಮಾಣವಾಗಿದ್ದು, ಮೇ 26 ರಂದು ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಿಜೆಪಿ ನಾಯಕರುಗಳು. ಇನ್ನು ಮೂರು ಬೃಹತ್ ವೇದಿಕೆಗಳು ಚಿತ್ರದುರ್ಗದಲ್ಲಿ ನಿರ್ಮಾಣವಾಗಲಿವೆ. ನಾಳಿನ ಕಾರ್ಯಕ್ರಮಕ್ಕೆ ಇಂದೇ ಬಿಜೆಪಿ ನಾಯಕರುಗಳು ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ಇಂದು ಕೂಡ ಚಿತ್ರದುರ್ಗದಲ್ಲಿ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದೇ ಚಿತ್ರದುರ್ಗಕ್ಕೆ ಬಿ. ಎಸ್.ಯಡಿಯೂರಪ್ಪ ಅವರು ತೆರಳಲಿದ್ದಾರೆ. ಇಂದು ಸಂಜೆ 4 ಘಂಟೆಗೆ ಪುರ ಪ್ರವೇಶ ಮಾಡಿ, ಕಾರ್ಯಕ್ರಮದಲ್ಲಿ ಭಾಗಿಯಾಗಿ ಚಿತ್ರದುರ್ಗದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಯಡಿಯೂರಪ್ಪರಿಗೆ ಅಭಿನಂದನೆಗಳನ್ನು ಸಲ್ಲಿಸಲು ಆಗಮಿಸುವ ನಾಯಕರಿಗೆ ಸನ್ಮಾನಿಸಲು ಅವಕಾಶ ನೀಡಲಾಗಿದೆ. ಬಳಿಕ ಮಧ್ಯಾಹ್ನ 2 ಘಂಟೆಗೆ ವೇದಿಕೆ ಕಾರ್ಯಕ್ರಮ ಆರಂಭ. ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಘಂಟೆಗೆ ವೇದಿಕೆಯ ಕಾರ್ಯಕ್ರಮ ಆರಂಭವಾಗಲಿದೆ. ಮಧ್ಯಾಹ್ನ 3:45 ಕ್ಕೆ ವೇದಿಕೆಗೆ ಅಮಿತ್ ಶಾ ಆಗಮಿಸಲಿದ್ದಾರೆ. ಸಂಜೆ 4:30 ಕ್ಕೆ ಬೃಹತ್ ವೇದಿಕೆಯಲ್ಲಿ ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಬಳಿಕ ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಯಕರ್ತರು ಹಾಗೂ ಯಡಿಯೂರಪ್ಪರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನ್ನಾಡಲಿದ್ದು, ಇದಾದ ಬಳಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ. ಸಂಜೆ 7:30 ರ ಸುಮಾರಿಗೆ ಕಾರ್ಯಕ್ರಮದ ಸಮಾಪ್ತಿಯಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು