LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಲ್ಕಿಸ್ ಬಾನು ಪ್ರಕರಣ ಅಪರಾಧಿಗಳಿಗೆ ಕ್ಷಮಾಪಣೆ ರದ್ದು

ನವದೆಹಲಿ: 2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡುವ ಗುಜ ರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.

ಪ್ರಕರಣದ 11 ಅಪರಾಧಿಗಳಿಗಳ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮುನ್ನವೇ ಅವರನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದು ಸೂಕ್ತ ನಿರ್ಧಾರವಲ್ಲ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಗುಜರಾತ್ ರಾಜ್ಯವು ಈ ರೀತಿಯ ಆದೇಶಗಳನ್ನು ನೀಡಲು ಸಮರ್ಥವಾಗಿಲ್ಲ. ಅಲ್ಲದೆ, ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಸಲ್ಲಿಸಿರುವ ಅರ್ಜಿಯು ಸಮರ್ಥವಾಗಿದೆ ಎಂದು ಅದು ಹೇಳಿದೆ.
ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಬಿಲ್ಕಿಸ್ ಬಾನು ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಆಗ ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಸಾವಿಗೀಡಾದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಆರೋಪ ಸಾಬೀತಾಗಿ 11 ಅಪರಾಧಿಗಳು 15ಕ್ಕೂ ಹೆಚ್ಚು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಹೀಗಾಗಿ 2022ರ ಆಗಸ್ಟ್ 15ರಂದು ಅವರೆಲ್ಲರೂ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.

ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಕಳೆದ ವರ್ಷ ನವೆಂಬರ್ 30 ರಂದು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗಳ ಬಿಡುಗಡೆಯು ಸಮಾಜದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಎಂದು ಹೇಳಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು