LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ ಒಂದು ವಿಕೆಟ್ ರೋಚಕ ಜಯ

ಸೂರತ್: ಇಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಅನುಭವಿ ಬ್ಯಾಟರ್ ಮನೀಶ್ ಪಾಂಡೆ ಅವರ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು ರೈಲ್ವೇಸ್ ವಿರುದ್ಧ 1 ವಿಕೆಟ್ ರೋಚಕ ಗೆಲುವು ಸಾಧಿಸಿದೆ.

226 ರನ್ ಗೆಲುವಿನ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಒಂದು ಹಂತದಲ್ಲಿ 214ಕ್ಕೆ ಒಂಬತ್ತು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.ಕೊನೆಯ ವಿಕೆಟ್‍ಗೆ ಗೆಲುವಿಗೆ 12 ರನ್‍ಗಳು ಬೇಕಾಗಿತ್ತು. ಈ ವೇಳೆ ಹೋರಾಟ ನಡೆಸಿದ ಪಾಂಡೆ ತಂಡಕ್ಕೆ ಗೆಲುವು ತಂದುಕೊಟ್ಟರು.

ಮನೀಶ್ ಪಾಂಡೆ 121 ಎಸೆತಗಳಲ್ಲಿ 67 ರನ್ ಗಳಿಸಿ (6 ಬೌಂಡರಿ, 1 ಸಿಕ್ಸರ್) ಅಜೇಯರಾಗಿ ಉಳಿದರು. ಕಡೆಯದಾಗಿ ಕಣಕ್ಕಿಳಿದ ವಾಸುಕಿ ಕೌಶಿಕ್ ಎರಡು ಎಸೆತಗಳಲ್ಲಿ ಅಜೇಯ 1 ರನ್ ಗಳಿಸಿದರು. ರವಿಕುಮಾರ್ ಸಮರ್ಥ್ (35), ಅನೀಶ್ ಕೆವಿ (34), ಶ್ರೀನಿವಾಸ ಶರತ್ (23) ಹಾಗೂ ವಿಜಯಕುಮಾರ್ ವೈಶಾಖ (38) ತಂಡಕ್ಕೆ ಉತ್ತಮ ಮೊತ್ತ ನೀಡಿದರು.

ಎರಡೂ ಇನ್ನಿಂಗ್ಸ್‍ಗಳಿಂದ ತಲಾ ಐದು ವಿಕೆಟ್ ಸೇರಿ ಪಂದ್ಯದಲ್ಲಿ ಒಟ್ಟು 10 ವಿಕೆಟ್ ಗಳಿಸಿದ ರೈಲ್ವೇಸ್ ತಂಡದ ಸ್ಪಿನ್ನರ್ ಆಕಾಶ್ ಪಾಂಡೆ ಹೋರಾಟ ಫಲಿಸಲಿಲ್ಲ. ರೈಲ್ವೇಸ್‍ನ 155 ರನ್‍ಗಳ ಗುರಿ ಬೆನ್ನಟ್ಟಿದ ಕರ್ನಾಟಕ ಮೊದಲ ಇನಿಂಗ್ಸ್‍ನಲ್ಲಿ 174 ರನ್ ಗಳಿಸಿತ್ತು. ಬಳಿಕ ವಿಜಯಕುಮಾರ್ ವೈಶಾಖ (67ಕ್ಕೆ 5 ವಿಕೆಟ್) ದಾಳಿಗೆ ತತ್ತರಿಸಿದ್ದ ರೈಲ್ವೇಸ್ ತಂಡ ಎರಡನೇ ಇನ್ನಿಂಗ್ಸ್‍ನಲ್ಲಿ 244ಕ್ಕೆ ಆಲೌಟ್ ಆಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು