LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಅಶುತೋಷ್ ಸಿಕ್ಸರ್- ಡೆಲ್ಲಿಗೆ ರೋಚಕ ಜಯ

ನವದೆಹಲಿ: ಮೊದಲು ಮಿಚೆಲ್ ಸ್ಟಾರ್ಕ್ಬೌಲಿಂಗ್, ಕೊನೆಯಲ್ಲಿ ನಾಯಕ ಅಕ್ಷರ್ ಪಟೇಲ್ ಮತ್ತು ಅಶುತೋಷ್ ಶರ್ಮಾಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನದ ವಿರುದ್ಧ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ರಾಜಸ್ಥಾನ 8 ವಿಕೆಟ್ ನಷ್ಟಕ್ಕೆ 193 ರನ್ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಇನ್ನೂ 4 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ನಷ್ಟಕ್ಕೆ 197 ರನ್ ಹೊಡೆದು ಜಯಗಳಿಸಿತು.ಕೊನೆಯ 24 ಎಸೆತಗಳಲ್ಲಿ ಡೆಲ್ಲಿಗೆ 43 ರನ್‌ಗಳ ಅಗತ್ಯವಿತ್ತು. 17ನೇ ಓವರ್‌ನಲ್ಲಿ ಸ್ಟಬ್ಸ್ ವಿಕೆಟ್ ಕಳೆದುಕೊಂಡ ಡೆಲ್ಲಿ 8 ರನ್ ಹೊಡೆದರೆ, ಫೆರೀರಾ ಎಸೆದ 18ನೇ ಓವರ್‌ನಲ್ಲಿ 18 ರನ್ ಬಂತು. ಬ್ರಿಜೇಶ್ ಶರ್ಮಾ ಎಸೆದ 19ನೇ ಓವರಿನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಔಟಾದರೂ ಈ ಓವರ್‌ನಲ್ಲಿ 12 ರನ್ ಸಿಕ್ಕಿತು. ಕೊನೆಯ ಓವರ್ ಮೊದಲ ಎರಡು ಎಸೆತಗಳಲ್ಲಿ ಬೌಂಡರಿ ಮತ್ತು ಸಿಕ್ಸ್ ಸಿಡಿಸುವ ಮೂಲಕ ಅಶುತೋಷ್ ಡೆಲ್ಲಿ ತಂಡಕ್ಕೆ ಜಯನ್ನು ತಂದುಕೊಟ್ಟರು. ಅಶುತೋಷ್ ಔಟಾಗದೇ 18 ರನ್( 5 ಎಸೆತ, 1 ಬೌಂಡರಿ, 2 ಸಿಕ್ಸ್) ಅಕ್ಷರ್ ಪಟೇಲ್ ಔಟಾಗದೇ 34 ರನ್(18 ಎಸೆತ, 2 ಬೌಂಡರಿ, 2 ಸಿಕ್ಸ್) ಸಿಡಿಸಿದರು. ಅಭಿಷೇಕ್ ಪೊರೆಲ್ ಮತ್ತು ಮತ್ತು ಕೆಎಲ್ ರಾಹುಲ್ ಮೊದಲ ವಿಕೆಟಿಗೆ 61 ಎಸೆತಗಳಲ್ಲಿ 105 ರನ್ ಜೊತೆಯಾಟವಾಡಿದರು. ಅಭಿಷೇಕ್ 51 ರನ್(31 ಎಸೆತ, 7 ಬೌಂಡರಿ, 1 ಸಿಕ್ಸ್), ಕೆಎಲ್ ರಾಹುಲ್ 56 ರನ್(42 ಎಸೆತ, 1 ಬೌಂಡರಿ, 1 ಸಿಕ್ಸ್) ಹೊಡೆದು ಔಟಾದರು.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ರಾಜಸ್ಥಾನ ಪರ ವೈಭವ್ ಸೂರ್ಯವಂಶಿ 46 ರನ್(21 ಎಸೆತ, 5 ಬೌಂಡರಿ, 3 ಸಿಕ್ಸ್), ಧ್ರುವ್ ಜುರೇಲ್ 53 ರನ್(40 ಎಸೆತ, 5 ಬೌಂಡರಿ, 2 ಸಿಕ್ಸ್), ನಾಯಕ ರಿಯಾನ್ ಪರಾಗ್ 51 ರನ್(26 ಎಸೆತ, 3 ಬೌಂಡರಿ, 5 ಸಿಕ್ಸ್) ಹೊಡೆದು ಔಟಾದರು.ಮಿಚೆಲ್ ಸ್ಟಾರ್ಕ್ 4 ವಿಕೆಟ್ ಪಡೆದರೆ ಲುಂಗಿ ಎನ್‌ಗಿಡಿ ಮತ್ತು ಮಾಧವ್ ತಿವಾರಿ ತಲಾ 2 ವಿಕೆಟ್ ಪಡೆದರು. ಇನ್ಸಿಂಗ್ಸ್ನ 15ನೇ ಓವರಿನ ಸ್ಟಾರ್ಕ್ ರಿಯಾನ್ ಪರಾಗ್, ಫೆರೀರಾ, ರವಿ ಸಿಂಗ್ ಅವರನ್ನು ಔಟ್ ಮಾಡುವ ಮೂಲಕ ರಾಜಸ್ಥಾನ ರನ್ ಓಟಕ್ಕೆ ರೋಚಕ ತಿರುವು ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು