LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಅನಂತ ಕುಮಾರ್ ಹೆಗಡೆ ಹೇಳಿಕೆ ಸಮರ್ಥನೀಯ’

ದೊಡ್ಡಬಳ್ಳಾಪುರ: ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಹ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಹಾಗೂ ಏಕವಚನದಲ್ಲಿ ಮಾತನಾಡಿದ್ದಾರೆ.ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ ಕಾಂಗ್ರೆಸ್ಸಿಗರಿಗೆ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಹೇಳಿದರು.

ಗುರುವಾರ ನಗರದ ಸಾರಥಿ ನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು,ಸಚಿವರು ಸರ್ಕಾರದ ನ್ಯೂನತೆಗಳನ್ನು ಮುಚ್ಚಿ ಕೊಳ್ಳುವ ಹಾಗೂ ಸರ್ಕಾರದ ದಿವಾಳಿತನವನ್ನು ಮರೆಮಾಚುವ ಸಲುವಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ವಿವಾದ ಸೃಷ್ಟಿಸಿದರು ದೂರಿದರು.

ಅನಂತ ಕುಮಾರ್ ಹೆಗಡೆ ಅವರು ಸುಸಂಸ್ಕೃತ, ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಹೇಳಿಕೆಯನ್ನ ವಿವಾದ ಎಂದು ಬಿಂಬಿಸಲಾಗುತ್ತಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತನಾಡಿದರೆ ಅಸಭ್ಯ ಹೇಗಾಗುತ್ತದೆ? ಬಿಜೆಪಿ ಮೌನಕ್ಕೆ ಯತ್ನಾಳ್ ಹೇಳಿಕೆಯ ಅನುಮಾನಗಳು ಸೂಕ್ತವಾಗುವ ಲಕ್ಷಣಗಳಿವೆ ಎಂದರು.ಕದಂಬ ಬ್ರಿಗೇಡ್ ನ ಸಿ.ಕೆ.ದಯಾನಂದ, ಸುರೇಶ್, ಕನಕರಾಜ್, ಶಿವರಾಜ್, ಆಟೋ ರಮೇಶ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು