LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗೌರಿ ಚಿತ್ರದ ಮೊದಲ ಹಾಡು ಅನಾವರಣ

ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸುತ್ತಿರುವ "ಗೌರಿ" ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ.ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಇದರ ಮೊದಲ ಹಾಡು ಲೋಕಾರ್ಪಣೆಯಾಯಿತು. ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿಜಯ್ ಈಶ್ವರ್ ಬರೆದಿರುವ "ಟೈಮ್ ಬರತ್ತೆ" ಎಂಬ ಹಾಡು ಈ ಚಿತ್ರದ ಚೊಚ್ಚಲಗೀತೆಯಾಗಿ ಬಿಡುಗಡೆಯಾಗಿದ್ದು, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಮಾತನಾಡಿದ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು "ಗೌರಿ" ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಐದು ಜನ ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು "ಗೌರಿ" ಚಿತ್ರದ ಹಾಡುಗಳನ್ನು ಹಾಡಿದ್ದಾರೆ.

ಇಂದು ಚಂದನ್ ಶೆಟ್ಟಿ ಸಂಗೀತ ನೀಡಿ ಹಾಡಿರುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಉಳಿದ ಹಾಡುಗಳು ಅನಾವರಣವಾಗಲಿದೆ.

ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು."ಗೌರಿ" ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ ಎಂದರು ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು