LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆಂಧ್ರರೈಲು ಅಪಘಾತ ಮೃತರ ಸಂಖ್ಯೆ 14ಕ್ಕೇರಿಕೆ

ಅಮರಾವತಿ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 50ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತಕ್ಕೆ ಮಾನವ ಲೋಪವೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿದೆ. ವಿಶಾಖಪಟ್ಟಣಂ- ರಾಯಗಢ ಪ್ಯಾಸೆಂಜರ್ ರೈಲು ಮಾನವ ಲೋಪದಿಂದಾಗಿ ಸಿಗ್ನಲ್ ಮೀರಿದ್ದು, ಇದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಇಸಿಓಆರ್ ಸಿಪಿಆರ್ ಒ ಬಿಸ್ವಜೀತ್ ಸಾಹೂ ಹೇಳಿದ್ದಾರೆ.

ನಿಲುಗಡೆಗೆ ಸಿಗ್ನಲ್ ತೋರುತ್ತಿದ್ದರೂ ಅದನ್ನು ಗಮನಿಸದೇ ರೈಲು ಚಲಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಇದನ್ನೇ `ಸಿಗ್ನಲ್ ಓವರ್ ಶೂಟಿಂಗ್' ಎನ್ನುತ್ತಾರೆ ಎಂದು ಸಾಹು ತಿಳಿಸಿದ್ದಾರೆ. ಅಪಘಾತದ ಪರಿಣಾಮವಾಗಿ ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿನ ಹಿಂಭಾಗದಿಂದ ಎರಡು ಕೋಚ್‍ಗಳು ಮತ್ತು ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್‍ನ ಲೊಕೊ ಹಳಿತಪ್ಪಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ವಿಶೇಷ ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್‍ಗೆ (08532) ಡಿಕ್ಕಿ ಹೊಡೆದಿರುವ ಘಟನೆ ಸಂಜೆ 7.10 ರ ಸುಮಾರಿಗೆ ನಡೆದಿದೆ. ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿತ್ತು.

14 ಪ್ರಯಾಣಿಕರಲ್ಲಿ 11 ಮಂದಿಯನ್ನು ಇದುವರೆಗೆ ಗುರುತಿಸಲಾಗಿದೆ ಎಂದು ವಿಜಯನಗರಂ ಜಿಲ್ಲಾಧಿಕಾರಿ ಎಸ್ ನಾಗಲಕ್ಷ್ಮಿ ತಿಳಿಸಿದ್ದಾರೆ.ಗಾಯಗೊಂಡವರಲ್ಲಿ 32 ಮಂದಿ ವಿಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಸೋಮವಾರ ಮಧ್ಯಾಹ್ನ ಸಿಎಂ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು