LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶ್ರೀ ದತ್ತ ಸಾಯಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ

ಬೇತಮಂಗಲ: ಪಟ್ಟಣದ ಶ್ರೀ ದತ್ತ ಸಾಯಿ ಇಂಟರ್ ನ್ಯಾಷನಲ್ ಶಾಲೆಯು ತನ್ನ ಯಶಸ್ವಿ ೨೦ ವರ್ಷಗಳ ಶೈಕ್ಷಣಿಕ ಪಯಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ  ವೈಭವವನ್ನು ಅತ್ಯಂತ ಸಡಗರದಿಂದ ಆಚರಿಸಿತು.
ಶಾಲಾ ಸಮೂಹ ಸಂಸ್ಥೆಯ ಕಾರ್ಯದರ್ಶಿ ಅ.ಮು ಲಕ್ಷಿ÷್ಮ  ನಾರಾಯಣ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಲು ಅದಷ್ಟು ಶುಲ್ಕವನ್ನು ಕಡಿಮೆ ಮಾಡಿದ್ದೇನೆ. ಈ ಪ್ರಸಕ್ತ ಸಾಲಿನಲ್ಲಿ ಐಸಿಎಸ್ ಸಿ ಸಿಲಬಸ್ ಆರಂಭಿಸಲಾಗಿದೆ. ಗ್ರಾಮೀಣ ಗಡಿ ಭಾಗದ ಹಳ್ಳಿಗಳ ಜನ ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿ ಜಲಜಾ ಮಂಜುನಾಥ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಾಲೆಗಳಿಗೆ ಸರಿಸಮನಾದ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈ ಸಂಸ್ಥೆಯನ್ನು ಪ್ರಾರಂಭಿಸಲಾಯಿತು ಎಂದು ತಿಳಿಸಿದರು.
ಶಿಕ್ಷಣದ ಬಗ್ಗೆ ಅಷ್ಟಾಗಿ ಅರಿವಿಲ್ಲದ ಪೋಷಕರ ಮಕ್ಕಳಿಗೆ ತಂದೆ-ತಾಯಿಯ ಪ್ರೀತಿಯೊಂದಿಗೆ ಮಾರ್ಗದರ್ಶನ ನೀಡಿ, ಅವರಲ್ಲಿ ಕಲಿಕೆಯ ಆಸಕ್ತಿ ಮೂಡಿಸುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ.
ಎಸ್.ಎಸ್.ಎಲ್.ಸಿ ಫಲಿತಾಂಶದ ವಿಶ್ವಾಸ: ಮುಂಬರುವ ೧೦ನೇ ತರಗತಿ ಪರೀಕ್ಷೆಗಾಗಿ ಕಳೆದ ೧೫ ದಿನಗಳಿಂದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಪರೀಕ್ಷೆಯಲ್ಲಿ ಸಂಸ್ಥೆಯು ಶೇ. ೧೦೦ರಷ್ಟು ಫಲಿತಾಂಶ ಪಡೆಯುವ ವಿಶ್ವಾಸವಿದ್ದು, ಅನೇಕ ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸುವ ನಿರೀಕ್ಷೆಯಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ಪ್ರೀ-ಕೆಜಿ ಮಕ್ಕಳಿಗೆ ಉಚಿತ ತರಬೇತಿ: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ಸಿದ್ಧಪಡಿಸುವ ದೃಷ್ಟಿಯಿಂದ, ಪ್ರಸ್ತುತ ಮೂರು ತಿಂಗಳ ಕಾಲ ಪ್ರೀ-ಕೆಜಿ ಮಕ್ಕಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ೩೦ಕ್ಕೂ ಹೆಚ್ಚು ಮಕ್ಕಳು ಈ ಸೌಲಭ್ಯದ ಪ್ರಯೋಜನ ಪಡೆಯುತ್ತಿದ್ದಾರೆ.
ಗ್ರಾಮೀಣ ಮೀಸಲಾತಿ ಅರಿವು: ಹತ್ತು ವರ್ಷಗಳ ಕಾಲ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸಿಗುವ ಶೇ. ೧೦ರಷ್ಟು ಮೀಸಲಾತಿಯ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ.
ಈ ಮೂಲಕ ಗ್ರಾಮೀಣ ಪ್ರತಿಭೆಗಳು ಶೈಕ್ಷಣಿಕವಾಗಿ ಮುಂಚೂಣಿಗೆ ಬರಲು ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ನಡೆಸಿಕೊಟ್ಟ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪೋಷಕರು ಹಾಗೂ ಸಾರ್ವಜನಿಕರ ಮನಗೆದ್ದವು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಲಲೀತಮ್ಮ ಲಕ್ಷ÷್ಯಮೀನಾರಾಯಣ, ಕಾರ್ಯ೯ದಶಿ೯ ಅ,ಮುಲಕ್ಷಿ÷್ಮನಾರಾಯಣ್, ರೂರಲ್ ಡಿಗ್ರಿ ಕಾಲೇಜಿನ ನೀದೆ೯ಶಕರಾದ ವಿಜಯೇಂದ್ರ , ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ವಿಜೇಯೇಂದ್ರ, ಶಾಲಾ ಮುಖ್ಯಶಿಕ್ಷಕಿ ಜಾಸ್ಮಿನ್ ಸುಜಾತಾ, ಪಿಯು ಪ್ರಾಂಶುಪಾಲ ಮಾಲಿಕಾಜ೯ನ್, ಗ್ರಾಮೀಣ ಪ್ರೌಡ ಶಾಲೆಯ ಅಧ್ಯಕ್ಷ ಆರೀಫ್ ಖಾನ್, ಪ್ರಭಾಕರ್, ವೃಂದ, ಪೋಷಕರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

 

ಸಾಂಸ್ಕೃತಿಕ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು