LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಕಾರ್ಮಿಕರ ಸಂಘದ ವಾರ್ಷಿಕ ಮಹಾಸಭೆ’

ಬೇಲೂರು: ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಕಾರ್ಮಿಕರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಪಟ್ಟಣದ ವಿಷ್ಣು ರೀಜೆನ್ಸಿ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಟಿ.ವಿ. ಅಸೋಸಿಯೇಷನ್ ರಾಜ್ಯಾಧ್ಯಕ್ಷ ಶಶಿಕುಮಾರ್ ಉಪ್ಯೂರ್, ಕಾರ್ಮಿಕರ ಹಕ್ಕುಗಳ ರಕ್ಷಣೆ, ಕಲ್ಯಾಣ ಹಾಗೂ ವೃತ್ತಿಪರ ಅಭಿವೃದ್ಧಿಗಾಗಿ ಸಂಘ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವುದು, ಹಿರಿಯರನ್ನು ಸನ್ಮಾನಿಸುವುದು ಹಾಗೂ ಆರೋಗ್ಯ ಶಿಬಿರಗಳಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು. ಸಂಘದ ಬೆಳವಣಿಗೆಗೆ ಸದಸ್ಯರ ಒಗ್ಗಟ್ಟು ಮತ್ತು ಸಹಕಾರವೇ ಪ್ರಮುಖ ಶಕ್ತಿ ಎಂದು ತಿಳಿಸಿ, “ಸಹಕಾರವೇ ಸಂಘ, ಸಂಘವೇ ಶಕ್ತಿ” ಎಂಬ ಧ್ಯೇಯದೊಂದಿಗೆ ಎಲ್ಲರೂ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಬಿ. ಶಿವರಾಜ್ ಮಾತನಾಡಿ, ಪ್ರಾಮಾಣಿಕ ಸೇವೆ ಮತ್ತು ಗುಣಮಟ್ಟದ ಕಾರ್ಯವೈಖರಿಯಿಂದ ಸಂಘವು ಜನರ ವಿಶ್ವಾಸ ಗಳಿಸಿದೆ ಎಂದರು. ವೃತ್ತಿಯ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಂಘ ಸಕ್ರಿಯವಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಹಿರಿಯ ಸದಸ್ಯರನ್ನು ಗೌರವಿಸುವುದು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯಗಳು ಸಂಘದ ಸಾಮಾಜಿಕ ಕಳಕಳಿಯನ್ನು ತೋರಿಸುತ್ತವೆ ಎಂದು ಅಭಿಪ್ರಾಯಪಟ್ಟರು.ಸಂಘದ ಉಪಾಧ್ಯಕ್ಷ ಗಂಗರಾಜು ಮಾತನಾಡಿ, 2013ರಲ್ಲಿ ಆರಂಭವಾದ ಸಂಘವು ಕೆಲ ವರ್ಷಗಳ ವಿರಾಮದ ಬಳಿಕ 2023ರಲ್ಲಿ ಮರುಜೀವ ಪಡೆದು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು. ಕಳೆದ ಮೂರು ವರ್ಷಗಳಲ್ಲಿ ಸಂಘವು ಆರ್ಥಿಕವಾಗಿ ಸದೃಢಗೊಂಡಿದ್ದು, ಸದಸ್ಯರ ಸಹಕಾರದಿಂದ ಉಚಿತ ಆರೋಗ್ಯ ಶಿಬಿರ, ಸದಸ್ಯರ ಪ್ರವಾಸ ಹಾಗೂ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ತಿಳಿಸಿದರು. ಸದಸ್ಯರ ಕುಟುಂಬದ ಸಂಕಷ್ಟದ ಸಂದರ್ಭಗಳಲ್ಲಿ ನೆರವಾಗುವ ಉದ್ದೇಶದಿಂದ ನಿಧನ ಹೊಂದಿದ ಸದಸ್ಯರ ಕುಟುಂಬಕ್ಕೆ 5,000 ರೂ. ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದರು.ಕಾರ್ಮಿಕ ಇಲಾಖೆಯ ನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಷ್ರಾನಿಕ್ಸ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಸರ್ಕಾರದ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಆರೋಗ್ಯ ವಿಮೆ, ಅಪಘಾತ ಪರಿಹಾರ, ಮಕ್ಕಳಿಗೆ ವಿದ್ಯಾರ್ಥಿವೇತನ, ಉಚಿತ ಉಪಕರಣಗಳ ಕಿಟ್, ವಿವಾಹ ಸಹಾಯಧನ ಹಾಗೂ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯುತ್ತವೆ ಎಂದು ವಿವರಿಸಿದರು. ಅರ್ಹ ಕಾರ್ಮಿಕರು ಯೋಜನೆಗಳ ಬಗ್ಗೆ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.ಸರ್ಕಾರವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜಾರಿಗೊಳಿಸಿದ್ದು, ಅವು ನಿಜವಾದ ಹಾಗೂ ನಿಷ್ಠೆಯಿಂದ ದುಡಿಯುವ ಕಾರ್ಮಿಕರಿಗೆ ತಲುಪುವಂತಾಗಬೇಕು. ಕೆಲವು ಕಡೆಗಳಲ್ಲಿ ಅರ್ಹತೆ ಇಲ್ಲದವರೂ ಕಾರ್ಮಿಕ ಕಾರ್ಡ್ಗಳನ್ನು ಹೊಂದಿರುವುದರಿAದ ನೈಜ ಕಾರ್ಮಿಕರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಕಾರ್ಮಿಕ ಇಲಾಖೆಯು ಕಾರ್ಮಿಕ ಕಾರ್ಡ್ಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು. ಅನರ್ಹರು ಸೌಲಭ್ಯ ಪಡೆಯುವುದನ್ನು ತಡೆಯುವ ಮೂಲಕ ನಿಜವಾದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಂಘದಿAದ ಪ್ರತಿಭಾ ಪುರಸ್ಕಾರ ನೀಡಿ ಅಭಿನಂಧಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿ ಕಾರ್ಮಿಕರ ಸಂಘದ ಅದ್ಯಕ್ಷ ಕೇಬಲ್ ವಿಜಯಕುಮಾರ್,ರಾಜ್ಯ ಪ್ರಧಾನ ಕಾರ್ಯದರ್ಶಿ ಜಯರಾಮ್,ಕಾರ್ಮಿಕ ಇಲಾಖೆ ಅಧಿಕಾರಿ ಶಶಿಕಲಾ,ರಾಘವೇಂದ್ರ ಹತ್ವಾರ್,ನಜೀರುದ್ದೀನ್ ಶಹಜಾದ್,ಅಚ್ಚುತರಾವ್,ಮಧುಮಾಲತಿ ರುದ್ರೇಶ,ಹಾಗು ಸದಸ್ಯರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು