ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟಿçÃಯ ತನಿಖಾ ಸಂಸ್ಥೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟçಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಎನ್‌ಐಎ ರೆಡ್ ಕಾರ್ನರ್ ನೋಟಿಸ್ ಹಾಗೂ ಲುಕೌಟ್ ನೋಟಿಸ್ ಹೊರಡಿಸಿತ್ತು. ಅಲ್ಲದೆ, ಆರೋಪಿ ಉಮರ್ ಫಾರೂಕ್ ಸುಳಿವು ನೀಡಿದವರಿಗೆ 4 ಲಕ್ಷ ಇನಾಮು ಘೋಷಿಸಲಾಗಿತ್ತು.ಇದೀಗ ಉಮರ್ ಫಾರೂಕ್ ಬಂಧನದೊಂದಿಗೆ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಕೃತ್ಯ ಎಸಗಿದ ನಂತರ ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಸತತ ಪರಿಶ್ರಮದ ನಂತರ ಎನ್‌ಐಎ ತನಿಖಾಧಿಕಾರಿಗಳು ಕೊಚ್ಚಿಯಲ್ಲಿ ಸೆರೆಹಿಡಿದಿದ್ದು, ಮುಂದಿನ ಕಾನೂನು ಕ್ರಮಗಳಿಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.