LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ, 

ಬಾಲಸುಬ್ರಮಣಿಯನ್ ಬಂಧನ



ಬೆಂಗಳೂರು: ನಕಲಿ ಔಷಧ ದಂಧೆ ಪ್ರಕರಣದಲ್ಲಿ ಮತ್ತೋರ್ವ ಪ್ರಮುಖ ಆರೋಪಿ ಬಾಲಸುಬ್ರಮಣಿಯನ್‌ನನ್ನು ಚೆನ್ನೆöÊನಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ, ಕಿಂಗ್‌ಪಿನ್ ಪ್ರಶಾಂತ್ ಬಂಧನದ ನಂತರ ಇದೀಗ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾದಂತಾಗಿದೆ. ತನಿಖೆಯ ವೇಳೆ ಲಭ್ಯವಾದ ಸುಳಿವುಗಳ ಆಧಾರದ ಮೇಲೆ ಈ ಬಂಧನ ನಡೆದಿದೆ. ಬಾಲಸುಬ್ರಮಣಿಯನ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ಮುಂದಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಲಾಗಿದೆ.ಚೆನ್ನೈ ಮೂಲದ ಫಾರ್ಮಾ ಪಾಲುದಾರ ಎಂದು ಗುರುತಿಸಲಾಗಿರುವ ಬಾಲಸುಬ್ರಮಣಿಯನ್, ಡಿಎಂ ಫಾರ್ಮಾ ಔಷಧಿ ಕಂಪನಿಯಲ್ಲಿ ಪ್ರಶಾಂತ್ ಜೊತೆ ಪಾಲುದಾರರಾಗಿದ್ದ. ನಕಲಿ ಔಷಧಿಗಳ ತಯಾರಿಕೆ ಮತ್ತು ವಿತರಣೆಯಲ್ಲಿ ಈತನ ಪಾತ್ರ ಪ್ರಮುಖವಾಗಿತ್ತು ಎಂದು ತನಿಖೆಯಿಂದ ಬಯಲಾಗಿದೆ. ಈ ನಕಲಿ ಔಷಧ ಜಾಲದ ಪ್ರಕರಣದಲ್ಲಿ ಇದುವರೆಗೆ ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿಕೆಯಾಗಿದೆ. ಎಸ್‌ಐಟಿ ತಂಡವು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ನಕಲಿ ಔಷಧಿಗಳ ಉತ್ಪಾದನೆ ಮತ್ತು ಮಾರಾಟದ ಹಿಂದಿರುವ ಸಂಪೂರ್ಣ ಜಾಲವನ್ನು ಬಯಲಿಗೆಳೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST