LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಯ್ಡು ವಿರುದ್ಧ ಮತ್ತೊಂದು ಪ್ರಕರಣ ಹೈಕೋರ್ಟ್‍ನಿಂದ ಮಧ್ಯಂತರ ಜಾಮೀನು

ವಿಜಯವಾಡ: ಆಂಧ್ರಪ್ರದೇಶ ಅಪರಾಧ ತನಿಖಾ ಇಲಾಖೆ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವಿರುದ್ಧ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಿಸಿದೆ.

ಇದು ನಾಯ್ಡು ವಿರುದ್ಧ ರಾಜ್ಯ ತನಿಖಾ ಸಂಸ್ಥೆ ದಾಖಲಿಸಿದ ನಾಲ್ಕನೇ ಪ್ರಕರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸೋಮವಾರ ಎಸಿಬಿ ವಿಶೇಷ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ್ದಾರೆ.

ನಾಯ್ಡು, ಮಾಜಿ ಅಬಕಾರಿ ಸಚಿವ ಕೊಲ್ಲು ರವೀಂದ್ರ ಮತ್ತು ಆಂಧ್ರಪ್ರದೇಶ ಸ್ಟೇಟ್ ಬೆವರೇಜಸ್  ಕಾರ್ಪೋರೇಷನ್ ಲಿಮಿಟೆಡ್ (ಎಪಿಎಸ್ಬಿಸಿಎಲ್) ಮಾಜಿ ಕಮಿಷನರ್ ನರೇಶ್ ವಿರುದ್ಧ, ಕೆಲವು ಪೂರೈಕೆದಾರರು ಮತ್ತು ಡಿಸ್ಟಿಲರಿಗಳಿಗೆ ಅನುಕೂಲ ಮಾಡಿಕೊಟ್ಟು, ಮದ್ಯದ ಪರವಾನಗಿ ನೀಡಿದ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

ಮತ್ತೊಂದೆಡೆ ಇಂದು ಆಂಧ್ರ ಪ್ರದೇಶ ಹೈಕೋರ್ಟ್ ಚಂದ್ರಬಾಹು ನಾಯ್ಡು ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.ನವೆಂಬರ್ 24ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅನಾರೋಗ್ಯದಿಂದಿರುವ ನಾಯ್ಡು ಅವರು ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಿರುವುದಾಗಿ ಹೇಳಲಾಗಿದೆ. ಸದ್ಯ ನಾಯ್ಡು ಅವರು ರಾಜಮಂಡ್ರಿ ಜೈಲಿನಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು