LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮತ್ತೊಂದು ಮತ ಚೋರಿ

727 ಮತಗಳನ್ನು ಕೈಬಿಡಲಾಗಿದೆ: ರಾಹುಲ್ ಆರೋಪ


ದೆಹಲಿ: ಚುನಾವಣಾ ಆಯೋಗದಿಂದ ಮತ ಚೋರಿ ನಡೆಯುತ್ತಿದೆ ಎಂದು ಆರೋಪಿಸುತ್ತಲೇ ಬಂದಿರುವ ಎಐಸಿಸಿ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದೀಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಬೇಲಾ ಎಸ್ಟೇಟ್ ಕೊಳಗೇರಿ ಪ್ರದೇಶದಲ್ಲಿ 727 ಮತದಾರರ ಮತಗಳನ್ನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೈಬಿಡಲಾಗಿದೆ ಎಂದಿದ್ದಾರೆ. ನಿನ್ನೆ ಈ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು, ಇಂದು ಈ ಆರೋಪವನ್ನು ಮಾಡಿದ್ದಾರೆ. ಈ ಪ್ರದೇಶದಲ್ಲಿದ್ದ 728 ಮತದಾರರ ಪೈಕಿ ಓರ್ವರ ಹೆಸರನ್ನು ಮಾತ್ರ ಮತ ಪಟ್ಟಿಯಲ್ಲಿ ಉಳಿಸಿ ಉಳಿದವರೆಲ್ಲರ ಹೆಸರನ್ನು ಮತ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ. ಚುನಾವಣಾ ಆಯೋಗ ಪದೇ ಪದೇ ಇಂತಹ ಅಕ್ರಮಗಳನ್ನು ಎಸಗುತ್ತಿದೆ ಎಂದು ದೂರಿದ್ದಾರೆ. ಆದರೆ ರಾಹುಲ್‌ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿಗಳು ಈ ಪ್ರದೇಶದಲ್ಲಿ ಮತದಾರರ ಹೆಸರನ್ನು ಕೈಬಿಟ್ಟಿದ್ದರೆ ಪುನಃ ಸೇರ್ಪಡೆ ಮಾಡುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST