ಬೆಂಗಳೂರು: ನಗರದ ಮೊದಲ ಮುಖ್ಯ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಆರ್. ಹಿತೇಂದ್ರ ಅವರು ಮೊದಲ ದಿನವೇ ಫುಲ್ ಆಕ್ಟಿವ್ ಆಗಿದ್ದಾರೆ.
ಬೆಳಗ್ಗೆಯೇ ಕಚೇರಿಯಲ್ಲಿ ಐವರು ನೂತನ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಇಲಾಖೆಯಲ್ಲಿ ಶಿಸ್ತು ಮತ್ತು ಪಾರದರ್ಶಕತೆ ಕಾಪಾಡುವ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಸಭೆಯಲ್ಲಿ ಮಾತನಾಡಿದ ಆರ್. ಹಿತೇಂದ್ರ ಅವರು, ``ಪೊಲೀಸ್ ಮ್ಯಾನುವಲ್ನಲ್ಲಿ ಏನು ನಿಯಮಗಳಿವೆಯೋ ಅಷ್ಟು ಕೆಲಸವನ್ನು ಎಲ್ಲರೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ರೀತಿಯ ಅಶಿಸ್ತನ್ನು ನಾನು ಸಹಿಸುವುದಿಲ್ಲ'' ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.ಕಾನೂನುಬದ್ಧ ಕೆಲಸವನ್ನು ಮಾತ್ರ ಮಾಡಬೇಕು. ಅದನ್ನು ಬಿಟ್ಟು ಅಕ್ರಮ ಚಟುವಟಿಕೆಗಳು, ಮಾಫಿಯಾಗಳ ಜೊತೆ ಕೈಜೋಡಿಸುವುದು ಹಾಗೂ ಭ್ರಷ್ಟಾಚಾರದಲ್ಲಿ ತೊಡಗುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪು ಮಾಡುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.ರೌಡಿ ಸ್ಟ್ಯಾಂ ಡ್ ಇದೆ ಅಂತ ಯಾರೂ ಮೈಮರೆಯಬೇಡಿ. ಎಲ್ಲಾ ಐದು ಕಮಿಷನರ್ಗಳು ತಮ್ಮ ವ್ಯಾಪ್ತಿಯ ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಸಂದೇಶವನ್ನು ಸ್ಪಷ್ಟವಾಗಿ ತಲುಪಿಸಿ'' ಎಂದು ಹಿತೇಂದ್ರ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.