LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕೆರೆಗಳಲ್ಲಿ ಮೀನು ಹಿಡಿಯುವ ಗುತ್ತಿಗೆಯನ್ನು ಸಹಕಾರ ಸಂಘಗಳಿಗೆ ನೀಡಲು ಮನವಿ

ಕೋಲಾರ : ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನAತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು. ಸಂಘದಿAದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ, ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು. ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ಮಾಡಿದ್ದು ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. ೨೦೨೪-೨೫ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ ೨೦೨೫-೨೬ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆAಕಟರಮಣಪ್ಪ, ಸಿ.ದೇವರಾಜ್, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು