LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ

ಗುಂಡ್ಲುಪೇಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರನ್ನು ಗೆಲ್ಲಿಸುವ ಮೂಲಕ ಸಂಸದರನ್ನಾಗಿ ಮಾಡಬೇಕು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್ ನಿರಂಜನಕುಮಾರ್ ತಿಳಿಸಿದರು.

ಸಂಸತ್ ಚುನಾವಣೆಯ ಹಿನ್ನೆಲೆ ಬರಗಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಯ ಭೇಟಿ ಮಾಡಿ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಜೊತೆಗೂಡಿ ಸಭೆ ನಡೆಸಿ ಅವರು ಮಾತನಾಡಿದರು.ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜನ ಸಾಮಾನ್ಯರು ಹಾಗೂ ರೈತರಿಗೆ ಹೆಚ್ಚಿನ ಮನ್ನಣೆ ನೀಡಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಪ್ರತಿಯೊಬ್ಬರ ಏಳಿಗೆಯ ಹಿಂದೆ ನಿಂತಿದೆ.

ಗ್ರಾಮೀಣ ಭಾಗಕ್ಕೆ ಜಲ ಜೀವನ್ ಮೂಲಕ ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವ ಮೂಲಕ ತಳಮಟ್ಟದವರಿಗೂ ಸರ್ಕಾರದ ಸೌಲಭ್ಯಗಳು ತಲುಪಿವಂತೆ ಮಾಡಿದೆ. ಇದನ್ನು ಕಾರ್ಯಕರ್ತರು ಜನ ಸಾಮಾನ್ಯರಿಗೆ ತಿಳಿಸುವ ಮೂಲಕ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಾಗಿ ದುಡಿಯಬೇಕು ಎಂದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಮಹಾದೇವ ಪ್ರಸಾದ್, ಕನ್ನೆಗಾಲ ಸೋಮಣ್ಣ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಚನ್ನಮಲ್ಲಿಪುರ ಬಸವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕಮರಹಳ್ಳಿರವಿ, ಮುಖಂಡರಾದ ಸುರೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಮೂಡಲು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಮಂಚಳ್ಳಿ ಬಾಬುರವರು, ಮಳವಳ್ಳಿ ಮಹೇಶ, ಮಾದ್ರಹಳ್ಳಿ ಮಲ್ಲೇಶ್, ನವೀನ್ ಮೌರ್ಯ ಸ್ಥಳೀಯ ಮುಖಂಡರುಗಳು ಕಾರ್ಯಕರ್ತರುಗಳು ಬೂತ್ ಅಧ್ಯಕ್ಷರುಗಳು ಶಕ್ತಿ ಕೇಂದ್ರ ಅಧ್ಯಕ್ಷರುಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು