LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ವೀರ ಮಹಿಳೆ ಪ್ರಶಸ್ತಿಯನ್ನು ನೀಡಲು ಕಳೆದ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ತ್ರಿಪ್ರತಿಯಲ್ಲಿ ಭರ್ತಿ ಮಾಡಿ ಉಪನಿರ್ದೇಶಕರು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್. ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು-560029 ಇಲ್ಲಿಗೆ ಜನವರಿ 12 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29578688 ಮೂಲಕ ಸಂಪರ್ಕಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು