LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಸರ್ಕಾರಿ ನೌಕರರ ಮಕ್ಕಳ `ಪ್ರತಿಭಾ ಪುರಸ್ಕಾರ'ಕ್ಕೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ:2024 ನೇ ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇದರ ಸದುಪಯೋಗಪಡೆದು ಕೊಳ್ಳಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಜಿ.ಹರೀಶ್‍ಕುಮಾರ್ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ `ಪ್ರತಿಭಾ ಪುರಸ್ಕಾರ' ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2024 ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಷರತ್ತುಗಳು ಅನ್ವಯ: ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು. ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಆನ್‍ಲೈನ್ ನಲ್ಲಿ ಆಪ್‍ಲೋಡ್ ಮಾಡುವುದು.

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಆಪ್‍ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.ಪಿ.ಯು.ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನು Online link: https://bit.ly/ksgea2024pp ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಚಿಕ್ಕಬಳ್ಳಾಪುರ ದೂ.ಸಂಖ್ಯೆ: 9964183913, 9148611951 ಸಂಪರ್ಕಿಸುವುದು ಎಂದು ಅವರು ಕೋರಿದ್ದಾರೆ.

ವಿಶೇಷ ಸೂಚನೆ: ಎಸ್.ಎಸ್.ಎಲ್.ಸಿ. ಮತ್ತು ಸಿ.ಬಿ.ಎಸ್.ಸಿ ಫಲಿತಾಂಶ ಪ್ರಕಟಣೆಗೊಂಡ ನಂತರ ವಿದ್ಯಾರ್ಥಿಗಳ ಪೋಷಕರು ಮೇಲಿನ ಲಿಂಕ್ ಮೂಲಕವೇ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿ: 31.05.2024 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು