LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ
ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಷರತ್ತುಗಳು:

1. ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
2. 2023-24ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು.
3. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ
ವರಮಾನ ರೂ.2,50,000/-ಗಳ ಒಳಗಿರಬೇಕು.
ತಹಶಿಲ್ದಾರ್ ರವರಿಂದ ಪಡೆದ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಲಗತ್ತಿಸಬೇಕು.
4. ಪ್ರತಿಷ್ಠಿತ ಶಾಲೆಗಳಿಗೆ ಒಮ್ಮೆ ದಾಖಲಾದ
ವಿದ್ಯಾರ್ಥಿಗಳು 10 ಅಥವಾ 12ನೇ ತರಗತಿಯ ವರೆಗೆ ದಾಖಲಾದ ವಿದ್ಯಾಸಂಸ್ಥೆಯಲ್ಲಿಯೇ ವ್ಯಾಸಂಗ ಮುಂದುವರೆಸುವುದು.
5. 10ನೇ ತರಗತಿ ವ್ಯಾಸಂಗ ಪೂರ್ಣ ಗೊಳಿಸಿದ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿ ರುವ ಪ್ರತಿಷ್ಠಿತ ಶಾಲೆಯಲ್ಲಿ ಪಿ.ಯು.ಸಿ. ತರಗತಿಗಳನ್ನು ನಡೆಸದೇ ಇದ್ದಲ್ಲಿ, ಅದೇ ಜಿಲ್ಲೆಯಲ್ಲಿನ ಪಿ.ಯು.ಸಿ. ಇರುವ ಪ್ರತಿಷ್ಠಿತ ಶಾಲೆ/ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
6. ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆದುಕೊಳ್ಳಬಹುದಾಗಿದೆ.
7. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21.05.2 024 ರವರೆಗೆ ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.
8. ಪ್ರವೇಶ ಪರೀಕ್ಷೆಯನ್ನು ಡಯಟ್ ಮೂಲಕ ನಡೆಸಿ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.
9. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಈ ಕೆಳಕಂಡ ಅತಿ ಹಿಂದುಳಿದ ವರ್ಗದವರಿಗೆ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ.

ಪೌರ ಕಾರ್ಮಿಕರ ಮಕ್ಕಳು. ಸಫಾಯಿ ಕರ್ಮಚಾರಿಗಳವರ ಮಕ್ಕಳು. ಸ್ಮಶಾನಗಳಲ್ಲಿ ಕಾರ್ಯನಿರ್ವಹಿರ್ವಹಿಸುತ್ತಿರುವವರ ಮಕ್ಕಳು. ದೇವದಾಸಿರವರ ಮಕ್ಕಳು. ಅಂಗವಿಕಲತೆಯನ್ನು ಹೊಂದಿರುವವರ ಮಕ್ಕಳು. ಕೋವಿಡ್-19 ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು. ಸಿಂಗಲ್ ಪ್ಯಾಮಿಲಿ ಮಕ್ಕಳು. ಯೋಜನಾ ನಿರಾಶ್ರಿತರ ಮಕ್ಕಳು. ಮಾಜಿ ಸೈನಿಕರ ಮಕ್ಕಳು.

ಕೊಳಗೇರಿಯಲ್ಲಿ ವಾಸಿಸುತ್ತಿರುವವರ ಮಕ್ಕಳು. ಕೃಷಿ ಕಾರ್ಮಿಕರ ಮಕ್ಕಳು. ಸಾಲ ಬಾದೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು. ದೌರ್ಜನ್ಯದಲ್ಲಿ ನೊಂದವರ ಮಕ್ಕಳು. ಜೀತ ವಿಮುಕ್ತ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787448, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು