LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಯುವ ಚಿತ್ರದ "ಅಪ್ಪುಗೆ" ಹಾಡು ಬಿಡುಗಡೆ

ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಪುನೀತ್ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು."ಯವ", ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು.

ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ "ಅಪ್ಪುಗೆ" ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು.

ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು "ಯುವ" ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ ಎಂದು ಮಾತು ಆರಂಭಿಸಿದ ನಾಯಕ ಯುವ ರಾಜಕುಮಾರ್, ತಂದೆ - ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ. ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ.

ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ - ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ "ಅಪ್ಪುಗೆ" ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

"ಯುವ" ಚಿತ್ರದ ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಆನಂದ್ ಆಡಿಯೋ ಶ್ಯಾಮ್.ಛಾಯಾಗ್ರಾಹಕ ಶ್ರೀಶ ಕುದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು